ಮೈಸೂರು

ಮೂಡಾದಿಂದ ಪಾಲಿಕೆಗೆ 30 ಬಡಾವಣೆಗಳ ಹಸ್ತಾಂತರ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಹಾನಗರಪಾಲಿಕೆಗೆ ನಗರದ ಸುತ್ತಮುತ್ತ ಅಭಿವೃದ್ಧಿಗೊಂಡಿರುವ ಸುಮಾರು 60 ಬಡಾವಣೆಗಳನ್ನು ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ಮೂಡಾ ಅಧ್ಯಕ್ಷ ಕೆ.ಆರ್.ಮೋಹನ್ ಕುಮಾರ್ ತಿಳಿಸಿದ್ದಾರೆ. ಮೂಡಾ ಆಡಳಿತ ಮಂಡಳಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋಹನ್ ಕುಮಾರ್, ಪಾಲಿಕೆಗೆ ಈಗಾಗಲೇ ಹಸ್ತಾಂತರವಾಗಿರುವ 19 ಬಡಾವಣೆಗಳನ್ನು ಹೊರತುಪಡಿಸಿ ಇನ್ನೂ 30 ಬಡಾವಣೆಗಳನ್ನು ಸದ್ಯದಲ್ಲೇ ಹಸ್ತಾಂತರಿಸಲಾಗುವುದು ಎಂದರು.

ಈ ಬಡಾವಣೆಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕೆಲವು ಬಡಾವಣೆಗಳಲ್ಲಿ ಕಲ್ಪಿಸಲಾಗುತ್ತಿದೆ. 21 ತಿಂಗಳುಗಳ ಕಾಲ ಯಶಸ್ವಿಯಾಗಿ ಸೇವೆ ಸಲ್ಲಿಸಿದ ಅವರು ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣದ ಕುರಿತು ಮಾತನಾಡಿ ಭವನ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಮೂಲ ಯೋಜನೆಗೆ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದೆ. ಹೆಚ್ಚುವರಿಯಾಗಿ ಸರ್ಕಾರ 14 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ತಿಳಿಸಿದರು. ಬಲ್ಲಹಳ್ಳಿ ಗ್ರಾಮದಲ್ಲಿ  ಶೇ 50:50ರ ಅನುಪಾತದಲ್ಲಿ ಬಡಾವಣೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮೂಡಾ ಆಯುಕ್ತ ಮಹೇಶ್, ಕಾರ್ಯದರ್ಶಿ ಸವಿತಾ, ಇಂಜಿನಿಯರ್ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: