ಪ್ರಮುಖ ಸುದ್ದಿ

ಮಾಜಿ ಸಿಎಂ, ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಮೊಮ್ಮಗ ಕೆಪಿಸಿಸಿ ವೈದ್ಯರ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ದಿಢೀರ್ ರಾಜೀನಾಮೆ

ರಾಜ್ಯ(ಚಿಕ್ಕಮಗಳೂರು)ಫೆ.11:-  ಮಾಜಿ ಸಿಎಂ, ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಅವರ ಮೊಮ್ಮಗ, ಕೆಪಿಸಿಸಿ ವೈದ್ಯರ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ನಿರಂತರ ಗಣೇಶ್ ಅವರು ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆಪ್ತ ಆಗಿರುವ ನಿರಂತರ ಗಣೇಶ್ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಆಕ್ಷಾಂಕಿಯಾಗಿದ್ದರು. ಚಿಕ್ಕಮಗಳೂರು ಮತ್ತು ಕಡೂರು ತಾಲೂಕಿನಲ್ಲಿ 80ಕ್ಕೂ ಅಧಿಕ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮ ನಡೆಸಿ ಬಡವರಿಗೆ ನೆರವಾಗಿದ್ದರು. ಆದರೆ ಈಗ ದಿಢೀರ್ ಆಗಿ ನಿರಂತರ ಗಣೇಶ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.

ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದಲ್ಲಿದ್ದು, ದುಡಿಯುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ ಪತ್ರವನ್ನು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: