ಕರ್ನಾಟಕ

ಕುಡಿದ ಮತ್ತಿನಲ್ಲಿ ಶಾಲಾ ಬಸ್ ಚಾಲನೆ: ಅಪಘಾತ; 13 ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು,ಫೆ.11-ಕುಡಿದ ಮತ್ತಿನಲ್ಲಿ ಶಾಲಾ ಬಸ್ ಚಲಾಯಿಸಿದ ಚಾಲಕ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲೂರು ಸಂತೆ ಬಳಿ ನಡೆದಿದೆ.

ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ನಾಗಾರ್ಜುನ ಕಾಲೇಜು ಬಸ್‌ಗೆ ಡಿಕ್ಕಿ ಹೊಡೆದಿದೆ. ಹದಿಮೂರು ವಿದ್ಯಾರ್ಥಿಗಳು ಗಾಯಗೊಂಡುದ್ದಾರೆ. ಡೆಲ್ಲಿ ಪಬ್ಲಿಕ್ ಶಾಲಾ ಬಸ್ ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ.

ಮೊದಲಿಗೆ ರಸ್ತೆ ಪಕ್ಕದಲ್ಲಿ ನಿಂತಿದ್ದ ನಾಗಾರ್ಜುನ ಕಾಲೇಜ್​ ಬಸ್​ಗೆ ಡೆಲ್ಲಿ ಪಬ್ಲಿಕ್​ ಸ್ಕೂಲ್​ ಬಸ್​ ಡಿಕ್ಕಿ ಹೊಡೆದಿದೆ. ಬಳಿಕ ಟ್ರಾನ್ಸ್​ಫಾರಂಗೆ ಡಿಕ್ಕಿ ಹೊಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಘಟನೆಯಲ್ಲಿ ನಿತೀಶ್​ ಎಂಬ ವಿದ್ಯಾರ್ಥಿಗೆ ಕಾಲು ಮುರಿದಿದೆ. ಘಟನೆ ಬಳಿಕ ಬಸ್ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದ್ದಾರೆ. ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಂ.ಎನ್)

Leave a Reply

comments

Related Articles

error: