ಕರ್ನಾಟಕದೇಶ

ಗೌರಿ ಲಂಕೇಶ್, ಕಲಬುರ್ಗಿ ಹತ್ಯೆ: ಸಿಐಡಿ ತನಿಖೆಯಲ್ಲಿ ಮತ್ತೊಂದು ರಹಸ್ಯ ಬಯಲು

ಬೆಂಗಳೂರು (ಫೆ.11): ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣದ ಸಿಐಡಿ ತನಿಖೆ ಕೊನೆಯ ಹಂತ ತಲುಪಿದ್ದು, ಕೆಲವೇ ದಿನಗಳಲ್ಲಿ ಕೋರ್ಟ್‍ಗೆ ಕೇಸ್ ಚಾರ್ಜ್‍ಶೀಟ್ ಸಲ್ಲಿಕೆ ಮಾಡಲಾಗುವುದು.

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿಗಳೇ ಎಂ.ಎಂ. ಕಲಬುರ್ಗಿ ಕೇಸ್ ನಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳಾದ ಅಮೋಲ್ ಕಾಳೆ, ಗಣೇಶ್ ಮಿಸ್ಕಿನ್, ರಾಮಚಂದ್ರ ಬದ್ದಿ, ಅಮಿತ್ ದೇಗ್ವೇಕರ್, ಕುರುಣ್ ಸುಧನ್ವ, ರಾಜೇಶ್ ಬಂಗೇರ, ಸುಜಿತ್, ಶರತ್ ಸೇರಿ ಹಲವರು ಕಲಬುರ್ಗಿ ಅವರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಗೌರಿ ಲಂಕೇಶ್ ಮತ್ತು ಕಲಬುರ್ಗಿ ಅವರ ಹತ್ಯೆಗೆ ಒಂದೇ ಪಿಸ್ತೂಲ್ ಬಳಕೆ ಮಾಡಿರುವ ಅಂಶ ಪತ್ತೆಯಾಗಿದ್ದು, ತನಿಖೆ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಸಿಐಡಿಯಿಂದ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುವುದು ಎಂದು ಹೇಳಲಾಗಿದೆ. (ಎನ್.ಬಿ)

Leave a Reply

comments

Related Articles

error: