ಕರ್ನಾಟಕಪ್ರಮುಖ ಸುದ್ದಿ

ದ.ಕನ್ನಡ: ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ

ಮಂಗಳೂರು (ಫೆ.12): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಕೋರರ ಮೇಲೆ ಪೊಲೀಸರು ದಾಳಿ ಮುಂದುವರೆಸಿದ್ದಾರೆ. ಮಂಗಳೂರು ನಗರ ಹೊರವಲಯದ ಅಡ್ಡೂರು ಗ್ರಾಮದ ಬಳಿ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಆಕ್ರಮ ಮರಳುಗಾರಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಕಬ್ಬಿಣದ ದೋಣಿ ಮೂಲಕ ಮರಳನ್ನು ಅಕ್ರಮವಾಗಿ ತೆಗೆಯುತ್ತಿದ್ದ ಜಾಗಕ್ಕೆ ಬಜ್ಪೆ ಪೊಲೀಸರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಮರಳುಗಾರಿಕೆಯ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ.

ದಾಳಿ ಸಂದರ್ಭದಲ್ಲಿ ಮರಳು ತುಂಬಿದ ಕಬ್ಬಿಣದ ದೋಣಿ, ಕುರುವ ಕಬ್ಬಿಣದ ದೋಣಿ, ಡ್ರೇಜ್ಜಿಂಗ್ ಯಂತ್ರವನ್ನು ಸೇರಿದಂತೆ ಇನ್ನಿತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ ಗೌಡ ಮಾರ್ಗದರ್ಶನದಲ್ಲಿ ಎಸ್.ಪರಶಿವಮೂರ್ತಿ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರಾದ ಶಂಕರ ನಾಯರಿ ಪೊಲೀಸ್ ಉಪನಿರೀಕ್ಷಕರು, ಎ.ಎಸ್.ಐ ಪೂವಪ್ಪ, ಠಾಣಾ ಸಿಬ್ಬಂದಿಗಳಾದ ರಾಜೇಶ್, ಅಭಿಷೇಕ್ ಪೂಜಾರಿ ಲಕ್ಷ್ಮಣ್ ಕಾಂಬಳೆ, ಹರಿಪ್ರಸಾದ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪದ್ಮಶ್ರೀ, ಕಂದಾಯ ಇಲಾಖೆಯ ನಿರೀಕ್ಷಕರಾದ ಆಸಿಫ್ ಮತ್ತು ಗ್ರಾಮ ಕರಣಿಕರಾದ ಪ್ರಮೀಳಾ ಭಾಗಿಯಾಗಿರುತ್ತಾರೆ. (ಎನ್.ಬಿ)

Leave a Reply

comments

Related Articles

error: