Uncategorized

ವಿದ್ಯಾರ್ಥಿವೇತನ ಅರ್ಜಿ ಆಹ್ವಾನ       

ಮೈಸೂರು, ಫೆ.14 :  ಸಮಾಜಕಲ್ಯಾಣ ಇಲಾಖೆ ವತಿಯಿಂದ 2018-19ನೇ ಸಾಲಿಗೆ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಹಾಗೂ ಇನ್ನಿತರ ತಾಂತ್ರಿಕ ಕೋರ್ಸುಗಳಲ್ಲಿ, ವಿವಿಧ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆÀ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸದ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ  sw.kar.nic.in  ನ  SC Post Matric Scholarship     ನಲ್ಲಿ ಅರ್ಜಿ ಸಲ್ಲಿಸಲು ಫೆಬ್ರವರಿ 11ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಆನ್‍ಲೈನ್ ಅರ್ಜಿಗಳ ದೃಢೀಕೃತ ದಾಖಲಾತಿ ಪ್ರತಿಗಳನ್ನು ಮೈಸೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಛೇರಿಗೆ ಫೆಬ್ರವರಿ 15ರ ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ 0821-2520910 ಸಂಪರ್ಕಿಸುವುದು ಎಂದು ತಾಲೂಕು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: