ಮೈಸೂರು

ಜಿ.ಪಂ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಕೊನೆಗೂ ಡೇಟ್ ಫಿಕ್ಸ್ : 23ಕ್ಕೆ ಚುನಾವಣೆ

ಮೈಸೂರು,ಫೆ.15:- ಮೈಸೂರು ಜಿ.ಪಂ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಕೊನೆಗೂ ಡೇಟ್ ಫಿಕ್ಸ್ ಆಗಿದ್ದು ಇದೇ 23ಕ್ಕೆ ಚುನಾವಣೆ ನಡೆಯಲಿದೆ ಎಂದು ಜಿ.ಪಂ.ಸಿಇಒ ಕೆ.ಜ್ಯೋತಿ ತಿಳಿಸಿದ್ದಾರೆ.

ಈ ಹಿಂದೆಯೂ ಚುನಾವಣೆ ದಿನಾಂಕ ನಿಗದಿಯಾಗಿ  ಮುಂದೂಡಲಾಗಿತ್ತು. ಇದೀಗ ಮತ್ತೆ ಚುನಾವಣೆ  ಡೇಟ್ ಫಿಕ್ಸ್ ಆಗಿದೆ. ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನ  ಮಾಡಲಾಗಿದೆ.

ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಬಗ್ಗೆ ಮಾಹಿತಿ ನೀಡಿದ ಜಿ.ಪಂ ಸಿಇಓ ಕೆ ಜ್ಯೋತಿ, ಫೆಬ್ರವರಿ 23ರ ಬೆಳಿಗ್ಗೆ 8 ರಿಂದ 10ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, 10ಗಂಟೆ ನಂತರ ಚುನಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಜಿ.ಪಂ ನ ಸಭಾಂಗಣದಲ್ಲಿ  ಚುನಾವಣೆ ನಡೆಯಲಿದೆ. ಪ್ರಾದೇಶಿಕ ಆಯುಕ್ತರೇ ಚುನಾವಣಾಧಿಕಾರಿಯಾಗಿದ್ದು, ಅವರ ಸಮ್ಮುಖದಲ್ಲೇ ಚುನಾವಣೆ ನಡೆಯಲಿದೆ ಎಂದರು.

ಫೆಬ್ರವರಿ 6ಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನು ಮುಂದೂಡಲಾಗಿತ್ತು. ಈಗಾಗಲೇ ಸಚಿವ ಸಾ.ರಾ ಮಹೇಶ್ ಸಹೋದರ ಸಾ.ರಾ ನಂದೀಶ್ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: