ಪ್ರಮುಖ ಸುದ್ದಿಮೈಸೂರು

ಮೈಸೂರು-ಕೊಡಗು ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಡಿ : ಆಗ್ರಹ

ಮೈಸೂರು,ಫೆ.15 : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಡುವಂತೆ ಕೆ.ಮರಿಗೌಡ ಅಭಿಮಾನಿಗಳ ಬಳಗ ವರಿಷ್ಠರನ್ನು ಒತ್ತಾಯಿಸಿದೆ.

ಕೇವಲ ಮೂರು ಬಾರಿ ಹೊರತುಪಡಿಸಿ ಉಳಿದೆಲ್ಲ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಿದೆ, ಹಾಗಾಗಿ ಮೈಸೂರು-ಕೊಡಗು ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆಯಾಗಿದೆ ಎಂದು ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಮೆಲ್ಲಹಳ್ಳಿ ಮಹದೇವಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿ.ಪಂ ಅಧ್ಯಕ್ಷರಾಗಿ, ಸಿದ್ದರಾಮಯ್ಯನವರ ಅನುಯಾಯಿಯಾಗಿ ಎಲ್ಲರ ವಿಶ್ವಾಸಗಳಿಸಿರುವ ಕೆ.ಮರಿಗೌಡ ಅವರಿಗೆ ಈ ಕ್ಷೇತ್ರದಿಂದ ಟಿಕೆಟ್ ನೀಡಿದಲ್ಲಿ ಎಲ್ಲರೂ ಒಮ್ಮತದಿಂದ ಅವರ ಗೆಲುವಿಗೆ ಶ್ರಮಿಸಲಾಗುವುದು. ಸಿದ್ದರಾಮಯ್ಯನವರ ವರ್ಚಸ್ಸು ಇತರ ನಾಯಕರ ಬೆಂಬಲದಿಂದ ಕ್ಷೇತ್ರವನ್ನು ಮರಳಿ ಪಡೆಯಲು ಸಹಕಾರಿಯಾಗಲಿದೆ ಎಂದರು.

ಅಭಿಮಾನಿ ಬಳಗದ ಮುಖಂಡರಾದ ಎಪಿಎಂಸಿ ಅಧ್ಯಕ್ಷ ಪ್ರಭು, ಜವರಪ್ಪ, ದೂರ ನಾಗರಾಜು,ಕೃಷ್ಣ ಮೊದಲಾದವರು ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: