
ಮೈಸೂರು,ಫೆ.15 : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಡೆಸುತ್ತಿದ್ದ ರಸ್ತೆ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ ಎಂದು ರಸ್ತೆ ಬದಿ ವ್ಯಾಪಾರಿಗಳ ಸಂಘವು ತಿಳಿಸಿದೆ.
ಪಾಲಿಕೆಯು ಏಕಾಏಕಿ ರಸ್ತೆ ಬದಿ ವ್ಯಾಪಾರಿಗಳ ಮೇಲೆ ಕೈಗೊಂಡ ಕಾರ್ಯಾಚರಣೆ ನಡೆಸುತ್ತಿರುವುದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಮಹಾಮಂಡಳವು ಮೈಸೂರಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, 2010-11ರಲ್ಲಿ ಪಾಲಿಕೆ ಸರ್ವೆಯಲ್ಲಿ ಇರುವ ವ್ಯಾಪಾರಿಗಳನ್ನು ಹೊರತು ಪಡಿಸಿ ಉಳಿದವರನ್ನು ತೆರವುಗೊಳಿಸಬಹುದೆಂದು ತಡೆಯಾಜ್ಞೆಯಲ್ಲಿ ತಿಳಿಸಲಾಗಿದೆ ಎಂದು ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. (ಕೆ.ಎಂ.ಆರ್)