ಸುದ್ದಿ ಸಂಕ್ಷಿಪ್ತ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅನುಮೋದನೆ : ಅಭಿನಂದನೆ

ಮೈಸೂರು,ಫೆ.15 : ಆರ್ಥಿಕವಾಗಿ ಅತಿ ಹಿಂದುಳಿದಿದ್ದ ಬ್ರಾಹ್ಮಣ ಸಮುದಾಯಕ್ಕೆ ಸೌಲಭ್ಯ ಕಲ್ಪಿಸಲು ಜಾರಿಗೆ ತಂದಿರುವ ‘ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚನೆಗೆ’ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವುದಕ್ಕೆ ರಾಜ್ಯ ಸರ್ಕಾರವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಭಿನಂದಿಸಿದೆ.

ಸುಮಾರು 25 ಕೋಟಿ ರೂ ಅನುದಾನ ಸೇರಿದಂತೆ ಹಲವು ವಿಷಯಗಳಿಗೆ ಅನುಮೋದನೆ ದೊರೆತಿರುವುದಕ್ಕೆ ಆರ್ಥಿಕವಾಗಿ ಹಿಂದುಳಿದಿರುವ ಹಲವು ಕುಟುಂಬಗಳಿಗೆ ಸಹಾಯವಾಗಲಿದ್ದು ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಲಾಗಿದೆ ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಕಂಠ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: