ಮೈಸೂರು

9ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಫೆ.2 ರಿಂದ 9ರವರೆಗೆ

9ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಫೆ.2 ರಿಂದ 9ರವರೆಗೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಏಕಕಾಲದಲ್ಲಿ ನಡೆಯುವುದು, ಸುಮಾರು 200 ಚಿತ್ರಗಳು ಉತ್ಸವದಲ್ಲಿ ಪ್ರದರ್ಶಿತಗೊಳ್ಳಿವೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರಸಿಂಗ್ ಬಾಬು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬುಧವಾರ ವಾರ್ತಾ ಇಲಾಖೆ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ಸಿನಿಮೋತ್ಸವದ ಹಿನ್ನೆಲೆಯಲ್ಲಿ ಈಗಾಗಲೇ ಪೂರ್ವಸಿದ್ಧತೆಗಳು ಬಿರುಸಿನಿಂದ ನಡೆದಿದ್ದು ಬೆಂಗಳೂರಿನ ರಾಜಾಜಿನಗರದ ಒರಿಯನ್ ಮಾಲ್, ಪಿವಿಆರ್ ಸಿನಿಮಾಸ್‍ ಹಾಗೂ ಮೈಸೂರಿನ ಐನಾಕಸ್ ಸಿಮಾಸ್‍ನಲ್ಲಿ ಪ್ರದರ್ಶನಗೊಳ್ಳಲಿವೆ. ಸಿನಿಮೋತ್ಸವವು ಫೆ2ರಂದು ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳಲಿದ್ದು ಫೆ.9ರಂದು ಮೈಸೂರಿನ ಅರಮನೆ ಆವರಣದಲ್ಲಿ ಸಮಾರೋಪಗೊಳ್ಳುವುದು ಎಂದು ತಿಳಿಸಿ 17 ಕನ್ನಡ ಚಿತ್ರ ಸೇರಿದಂತೆ ಪ್ರತಿನಿತ್ಯ 20 ರಂತೆ 7 ದಿನ 140 ಸಿನಿಮಾಗಳ ಪ್ರದರ್ಶನಗೊಳ್ಳಲಿವೆ ಎಂದರು.

ಅಕಾಡೆಮಿ ಕಾರ್ಯದರ್ಶಿ ದಿನೇಶ್ ಮಾತನಾಡಿ, ಸಿನಿಮೋತ್ಸವವನ್ನು ಭಾರತೀಯ, ಕನ್ನಡ, ಏಷಿಯನ್ ಹಾಗೂ ಕನ್ನಡ ಜನಪ್ರಿಯ ಮನರಂಜನಾ ಚಿತ್ರಗಳ ಸ್ಪರ್ಧೆ ವಿಭಾಗ ಎಂದು ವಿಂಗಡಿಸಲಾಗಿದೆ. ಶತಮಾನೋತ್ಸವದ ನೆನಪು, ಅದ್ಭುತ ಭಾರತ ವಿಭಾಗದಲ್ಲಿ ವಿವಿಧ ಚಲನಚಿತ್ರಗಳು ಪ್ರದರ್ಶನಗೊಳ್ಳಿವೆ ಎಂದರು.

ಪ್ರದರ್ಶನ ಕಾಣದ ಅಪರೂಪದ ಚಲನಚಿತ್ರಗಳು ಸಿನಿಮೋತ್ಸವದಲ್ಲಿ ತೆರೆ ಮೇಲೆ ಬರಲಿವೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ತಿಳಿಸಿದರು. ಕಲಾ ನಿರ್ದೇಶಕ ಎನ್.ವಿದ್ಯಾಶಂಕರ್, ವಾರ್ತಾ ಮತ್ತು ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್ ಗೋಷ್ಠಿಯಲ್ಲಿ ಉಪಸ್ಥಿತರಿದದರು.

ಪ್ರತಿನಿಧಿಗಳ ನೋಂದಣಿ ಕಾರ್ಯ ಆರಂಭವಾಗಿದ್ದು ಆಸಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. 600 ರೂಪಾಯಿ ಪ್ರವೇಶ ಶುಲ್ಕವಿದ್ದು ವಿಶೇಷ ರಿಯಾಯಿತಿ ದರ 300 ರೂಪಾಯಿ ನಿಗದಿಗೊಳಿಸಲಾಗಿದೆ.

Leave a Reply

comments

Related Articles

error: