ಮೈಸೂರು

ಕೌಟುಂಬಿಕ ಕಲಹ : ಮಹಿಳೆ ನೇಣಿಗೆ ಶರಣು

ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಶೋಕಪುರಂ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಜಯನಗರದ ನಿವಾಸಿ ರಂಗನಾಥ ಎಂಬುವರ ಪತ್ನಿ ದಿವ್ಯಾ (29) ಆತ್ಮಹತ್ಯೆಗೆ ಶರಣಾದವರು. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಪತಿಯ ವಿರುದ್ಧ ದೂರು ದಾಖಲಾಗಿದೆ.

ದಿವ್ಯಾ ಮತ್ತು ರಂಗನಾಥ ಏಳು ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಒಂದು ಮಗುವಿದೆ. ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿಯ ನಡುವೆ ವೈಮನಸ್ಸು ಬೆಳೆದಿತ್ತು. ಹೀಗಾಗಿ ಆರು ವರ್ಷಗಳಿಂದ ದಿವ್ಯಾ ತವರು ಮನೆ ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈಚೆಗೆ ಪತ್ನಿಯ ಮನವೊಲಿಸಿದ ರಂಗನಾಥ, ಜಯನಗರದ ಬಾಡಿಗೆ ಮನೆಯಲ್ಲಿ ಸಂಸಾರ ಹೂಡಿದ್ದ. ಬುಧವಾರ ಬೆಳಿಗ್ಗೆ ದಂಪತಿಯ ನಡುವೆ ಮತ್ತೆ ಜಗಳ ಉಂಟಾಗಿದೆ. ಪತ್ನಿಯನ್ನು ಅವ್ಯಾಚ ಶಬ್ಧಗಳಿಂದ ನಿಂದಿಸಿದ ಪತಿ, ಮನೆಯಿಂದ ಹೊರಬಂದಿದ್ದಾನೆ. ಇದರಿಂದ ಮನನೊಂದ ದಿವ್ಯಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಾಹ್ನದ ವೇಳೆಗೆ ರಂಗನಾಥ ಮನೆಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

comments

Related Articles

error: