ಮೈಸೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಕಾರ್ಯಕರ್ತರಿಂದ ಜಿಲ್ಲಾಧಿಕಾರಿಗೆ ಮನವಿಪತ್ರ

ಕಾರ್ಮಿಕರಿಗೆ ವೇತನದಲ್ಲಿ ಹೆಚ್ಚಳ, ರೈತರಿಗೆ ಕೃಷಿ ವೇತನ ನೀಡುವುದು, ಎಲ್ಲಾ ರೀತಿಯ ಸಾಲಗಳನ್ನು ಮನ್ನಾ ಮಾಡುವುದು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಇಂದು ಬೆಳಿಗ್ಗೆ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಭಟನಾಕಾರರು, ಈಗ ಕಾರ್ಮಿಕರಿಗೆ ನೀಡುತ್ತಿರುವ ವೇತನ ಬಹಳ ಕಡಿಮೆಯಿದ್ದು ಅದನ್ನು ಕನಿಷ್ಟ 18 ಸಾವಿರಕ್ಕೆ ಏರಿಸುವುದು, ಕಳೆದ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆ ಸರಿಯಾಗಿ ಬೀಳದೆ ಇರುವುದರಿಂದ ರೈತರು ಬೆಳೆ ಇಲ್ಲದೆ ಕಂಗಾಲಾಗಿದ್ದಾರೆ. ಹಾಗಾಗಿ ಅವರಿಗೆ ಕೃಷಿ ವೇತನ ನೀಡುವುದು, ಅವರು ಪಡೆದಿರುವ ಎಲ್ಲ ರೀತಿಯ ಸಾಲಗಳನ್ನು ಮನ್ನಾ ಮಾಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿದರು.

ಈ ಎಲ್ಲ ಅಂಶಗಳ ಬಗ್ಗೆ ಸರ್ಕಾರ ಗಮನ ಹರಿಸಿ ಮುಂದಿನ ದಿನಗಳಲ್ಲಿ ಶೀಘ್ರ ನಿರ್ಧಾರ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದರು.

ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ವಿವರವನ್ನೊಳಗೊಂಡ  ಮನವಿಪತ್ರವನ್ನು ಜಿಲ್ಲಾಧಿಕಾರಿ ಡಿ.ರಂದೀಪ್ ಅವರಿಗೆ ನೀಡಿ ಮುಂದಿನ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು.

Leave a Reply

comments

Related Articles

error: