ಸುದ್ದಿ ಸಂಕ್ಷಿಪ್ತ

ನೂತನ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಗೆ ಸನ್ಮಾನ

ಮೈಸೂರು,ಫೆ.16 : ಕಂಪ್ಯೂಟರ್ ಸೊಸೈಟ್ ಆಫ್ ಇಂಡಿಯಾ ಮೈಸೂರು ಚಾಪ್ಟರ್ ವತಿಯಿಂದ ಮೈಸೂರು ವಿಶ್ವವಿದ್ಯಾಲಯದ ನೂತನ ಕುಲಪತಿಗಳಾದ ಪ್ರೊ.ಜಿ.ಹೇಮಂತ್ ಕುಮಾರ್ ಅವರ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ.

ಫೆ.18ರ ಸಂಜೆ 5.30ಕ್ಕೆ ಇನ್ಸ್ ಟಿಟ್ಯೂಟ್ ಆಪ್ ಇಂಜಿನಿಯರ್ಸ್ ನಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಸೊಸೈಟಿ ಅಧ್ಯಕ್ಷ ಪ್ರೊ.ಎಂ.ಎಸ್.ವೀರಭದ್ರ ಕುಮಾರ್ ಅಧ್ಯಕ್ಷತೆ ವಹಿಸುವರು, ಅಲ್ಲದೇ ತ್ರೈಮಾಸಿಕ ನ್ಯೂಸ್ ಲೆಟರ್ ಅನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: