ಕರ್ನಾಟಕ

ರಾಷ್ಟ್ರೀಯ ಯುವ ಸ್ವಯಂ-ಸೇವಕರಿಗೆ ಅರ್ಜಿ ಆಹ್ವಾನ

ಮಂಡ್ಯ (ಫೆ.16): ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ದೇಶದಾದ್ಯಂತ “ರಾಷ್ಟ್ರೀಯ ಯುವ ಸ್ವಯಂ-ಸೇವಕರು” ಎಂಬ ಕಾರ್ಯಕ್ರಮವನ್ನು ನೆಹರು ಯುವ ಕೇಂದ್ರದ ಮೂಲಕ ಅನುಷ್ಠಾನಗೊಳಿಸುತ್ತಿದೆ.
ಈ ಯೋಜನೆಯಲ್ಲಿ ಜಿಲ್ಲಾವಾರು ಈ ಕೆಳಗಿನ ನಿಬಂಧನೆಗಳಿಗೆ ಅನುಗುಣವಾಗಿ ಯುವ ಜನರನ್ನು ನೇಮಕ ಮಾಡಿಕೊಂಡು ಅವರಿಗೆ ತರಬೇತಿ ನೀಡುವ ಮೂಲಕ ಅವರ ಗ್ರಾಮೀಣ ಪ್ರದೇಶದ ಯುವಜನರನ್ನು ಯುವಕ/ಯುವತಿ/ಮಹಿಳಾ ಮಂಡಳಿಗಳಾಗಿ ಸಂಘಟಿಸುವ ಹಾಗೂ ಅವರನ್ನು ಸಮಾಜಮುಖಿಗಳನ್ನಾಗಿಸುವ ಕಾರ್ಯವನ್ನು ನಿರ್ವಹಿಸಲು ಅರ್ಜಿ ಆಹ್ವಾನಿಸಿದೆ.
ಆಸ್ತಕರು ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯವರಿಗೆ ಆಧ್ಯತೆಯಿದೆ. 18-29 ವರ್ಷದ (1-4-2018)ಕ್ಕೆ ವಯೋಮಿತಿಯವರಾಗಿರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಮಂಡ್ಯ ಜಿಲ್ಲೆಯ ನಿವಾಸಿಗಳಾಗಿರಬೇಕು. ಯಾವುದೇ ಶಾಲಾ/ಕಾಲೇಜುಗಳ ವಿದ್ಯಾರ್ಥಿಗಳಾಗಿರಬಾರದು ಹಾಗೂ ಬೇರೆ ಯಾವುದೇ ಸಂಘ/ಸಂಸ್ಥೆ ಅಥವಾ ಇಲಾಖೆಯಲ್ಲಿ ಪೂರ್ಣ ಅಥವಾ ಅರೆಕಾಲಿಕ ಹುದ್ದೆಯಲ್ಲಿ ತೊಡಗಿಸಿಕೊಂಡಿರಬಾರದು.
ಯೋಜನೆಯ ಅವಧಿಯು 2 ವರ್ಷಗಳಿದ್ದಾಗಿದ್ದು, ಮೊದಲ ವರ್ಷದಲ್ಲಿ ಅವರ ಕೆಲಸ-ಕಾರ್ಯಗಳು ತೃಪ್ತಿಕರವಾಗಿದ್ದಲ್ಲಿ ಮಾತ್ರ ಅವರ ಸೇವೆಯನ್ನು ಎರಡನೆಯ ವರ್ಷಕ್ಕೆ ವಿಸ್ತರಿಸಲಾಗುವುದು. ಆಯ್ಕೆಯಾದವರು ತರಬೇತಿಗೆ ಹಾಜರಾಗುವುದು ಕಡ್ಡಾಯವಾಗಿರುತ್ತದೆಯಲ್ಲದೆ, ತರಬೇತಿ ನಂತರ ಗ್ರಾಮಗಳಿಗೆ ತೆರಳಿ ಯುವ ಸಂಘಟನಾ ಚಟುವಟಿಕೆಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಭಾವನೆ ಮತ್ತು ಪ್ರವಾಸ ಭತ್ಯೆಯೆಂದು ಮಾಹೆಯಾನ ರೂ.5,000/- ಅನ್ನು ಮಾತ್ರ ನೀಡಲಾಗುವುದು. ಅರ್ಜಿ ಹಾಕಬಯಸುವವರು ವೆಬ್ ಸೈಟ್ ಮುಖಾಂತರವೇ ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕು.  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 25 ಸಂಜೆ ಗಂಟೆ ಒಳಗಾಗಿ ಜಿಲ್ಲಾ ಯುವ ಸಮನ್ವಯಾಧಿಕಾರಿಗಳು, ನೆಹರು ಯುವ ಕೇಂದ್ರ, ಜಿಲ್ಲಾ ಪಂಚಾಯತ್ ಹತ್ತಿರ,ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜು ರಸ್ತೆ ಮಂಡ್ಯ ಇವರಿಗೆ ಸಲ್ಲಿಸಲು ತಿಳಿಸಿದೆ. (ಎನ್.ಬಿ)

Leave a Reply

comments

Related Articles

error: