ಮೈಸೂರು

ಹರಿ ವಿದ್ಯಾಲಯದ ವಾರ್ಷಿಕೋತ್ಸವ; ಜ.22ರಂದು

ಮೈಸೂರಿನ ಬೋಗಾದಿಯಲ್ಲಿರುವ ಹರಿ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವವು ಜ.22ರಂದು ನಡೆಯಲಿದೆ ಎಂದು ಪ್ರಾಂಶುಪಾಲ ಶ್ರೀವತ್ಸ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಶಾಲಾ ಆವರಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಖಾಸಗಿ ವಾಹಿನಿ ‘ಹರಟೆ’ ಕಾರ್ಯಕ್ರಮದ ನಿರೂಪಕ ವಿದ್ವಾನ್ ಹಿರೇಮಗಳೂರು ಕಣ್ಣನ್ ಅವರು ಚಾಲನೆ ನೀಡುವರು. ಶಾಲಾ ಅಧ್ಯಕ್ಷ ಎಂ.ಕೆ.ವೆಂಕಟೇಶಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಡಾ ಅಧ್ಯಕ್ಷ ಡಿ.ಧ್ರುವಕುಮಾರ್ ಪಾಲ್ಗೊಳ್ಳುವರು.

“ಬದಲಾಗುತ್ತಿರುವ ಸಮಾಜದಲ್ಲಿ ಮಾನವೀಯ ಮೌಲ್ಯಗಳು” ವಿಷಯವಾಗಿ ಬೆಳಿಗ್ಗೆ 10 ಗಂಟೆಗೆ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಳ್ಳುವರು. ನಂತರ ಸಂಜೆ 5ಕ್ಕೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು. ಕಾರ್ಯದರ್ಶಿ ಹೆಚ್.ಆರ್.ಭಗವಾನ್, ಮುಖ್ಯಸ್ಥೆ ಪೂರ್ಣಿಮಾ ಶ್ರೀಧರ್ ಹಾಗೂ ಮಧುಸೂದನ್ ಸುದ್ದಿಗೋಷ್ಠಿಯಲ್ಲಿದ್ದರು. ಸಂವಾದದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಹೆಸರು ನೋಂದಾಯಿಸಿಕೊಂಡಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2341488, 9449809181 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: