ಮೈಸೂರು

ಮತದಾನದ ಅರಿವು ಮೂಡಿಸುವ ಜಾಥಾ

ಮೈಸೂರು, ಫೆ.18:- ಸರಸ್ವತಿಪುರಂ ಜೆಎಸ್‍ಎಸ್ ಮಹಿಳಾ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್‍ನ ವತಿಯಿಂದ ಮತದಾನದ ಅರಿವು   ಜಾಥಾವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಈ ಜಾಥಾಕ್ಕೆ ಕಾಲೇಜಿನ ವಿವಿಧ ವಿಭಾಗಗಳ ಅಧ್ಯಾಪಕರುಗಳು, ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಜಾಥಾವು ಸರಸ್ವತಿಪುರಂ, ಕುವೆಂಪುನಗರದ ಮುಖ್ಯರಸ್ತೆಗಳಲ್ಲಿ ಸಂಚರಿಸಿ, ಮತದಾನದ ಅರಿವಿನ ಬಗ್ಗೆ ವಿವಿಧ ಘೋಷಣೆಗಳನ್ನು ಕೂಗುತ್ತಾ, ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿತು. ಭಾರತದಲ್ಲಿ ಪ್ರಜಾಪ್ರಭುತ್ವ ಯಶಸ್ವಿಯಾಗಲು ಮತ ದಾರರು ಪ್ರಮುಖ ಪಾತ್ರ ವಹಿಸಬೇಕಾಗುತ್ತದೆ, ಅದರಲ್ಲಿಯೂ ಯುವ ಮತದಾರರು ಪೂರ್ಣ ಪ್ರಮಾಣದಲ್ಲಿ ಮತದಾನದ ಹಕ್ಕನ್ನು ಪಡೆದು, ಚಲಾಯಿಸುವುದರ ಮೂಲಕ ಸದೃಢ ಭಾರತದ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ತಿಳುವಳಿಕೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ವಿ. ಸುರೇಶ, ಚುನಾವಣಾ ಸಾಕ್ಷರತಾ ಕ್ಲಬ್‍ನ ನೋಡಲ್ ಅಧಿಕಾರಿಯಾದ   ಎಂ.ಪಿ. ಮಹದೇವಸ್ವಾಮಿ, ಮತ್ತು ಸದಸ್ಯರುಗಳು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. (ಎಸ್.ಎಚ್)

Leave a Reply

comments

Related Articles

error: