ಮೈಸೂರು

ಬಸವೇಶ್ವರ ಪ್ರತಿಮೆಗೆ ಅವಮಾನ ವಿರೋಧಿಸಿ ಪ್ರತಿಭಟನೆ; ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯ

ಬಿಜಾಪುರ ತಾಲೂಕಿನ ನಿಡೋಣಿ ಗ್ರಾಮದಲ್ಲಿ ಬಸವೇಶ್ವರ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ ಅವಮಾನಗೊಳಿಸಿರುವ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಸಭಾ ಮೈಸೂರು ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡವರು ಮಾತನಾಡಿ, ವಚನಶ್ರೇಷ್ಠ ಕಾರರ ಪ್ರತಿಮೆಗೆ  ಈ ರೀತಿ ಮಾಡಿರುವುದು ಅತ್ಯಂತ ಖಂಡನೀಯ. ಕೃತ್ಯ ಎಸಗಿದವರು ಎಷ್ಟೇ ಪ್ರಬಲರಾಗಿದ್ದರೂ ಸರ್ಕಾರ ಕೂಡಲೇ ಅವರನ್ನು ಬಂಧಿಸಿ ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರ ಯಾವುದೇ ರೀತಿಯ ಒತ್ತಡ ಬಂದರೂ ಅದನ್ನು ಪರಿಗಣಿಸದೇ ದುಷ್ಕರ್ಮಿಗಳ ಬಂಧನಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು.

ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ರೀತಿಯ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಸಮಿತಿಯ ಅಧ್ಯಕ್ಷ ಹೆಚ್.ವಿ.ಬಸವರಾಜು ಹಿನಕಲ್ ಸೇರಿದಂತೆ ನೂರಾರು ಸದಸ್ಯರು ಪಾಲ್ಗೊಂಡಿದ್ದರು.

Leave a Reply

comments

Related Articles

error: