ಸುದ್ದಿ ಸಂಕ್ಷಿಪ್ತ

ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಬೃಹತ್ ಸಭೆ : ಜ. 19

ಬೃಹತ್ ರಕ್ಷಣಾ ವಲಯದ ಉದ್ಯಮವನ್ನು ಕೇಂದ್ರ ಸರ್ಕಾರ ತನ್ನ ಶೇ.54.03 ಷೇರಿನಲ್ಲಿ ಶೇ.26 ರಷ್ಟು ಷೇರುಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ತೀರ್ಮಾನವನ್ನು ಕೇಂದ್ರ ಸಚಿವ ಸಂಪುಟ ತೆಗೆದುಕೊಂಡಿದ್ದು, ಇದರಿಂದ ಸಂಸ್ಥೆಗೆ ಸುಮಾರು 8500 ಖಾಯಂ ಉದ್ಯೋಗಿಗಳು ಮತ್ತು 4500 ಗುತ್ತಿಗೆ ಕಾರ್ಮಿಕರಿಗೆ ಭವಿಷ್ಯದಲ್ಲಿ ಕೆಲಸದ ಅಭದ್ರತೆ ತಲೆದೋರಿದೆ. ಈ ದೇಶದ ಸಂಪತ್ತನ್ನು ಬಹಳ ಕಡಿಮೆ ಮೊತ್ತಕ್ಕೆ ಖಾಸಗಿಯವರ ಪಾಲಾಗುವುದನ್ನು ಸಂಸ್ಥೆಯ ಉದ್ಯೋಗಿಗಳು ಮತ್ತು ಕಾರ್ಮಿಕ ಸಂಘಟನೆಗಳು ವಿರೋಧಿಸಿ ಹಲವಾರು ಹೋರಾಟದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುತ್ತದೆ ಎಂದು ಭಾರತ್ ಅರ್ಥ್ ಮೂವರ್ಸ್ ಎಂಪ್ಲಾಯೀಸ್ ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಾ ಸಂಕೀರ್ಣಗಳ ಮುಂಭಾಗದಲ್ಲಿ ದ್ವಾರ ಸಭೆಗಳನ್ನು ನಡೆಸಿ ಸರ್ಕಾರದ ನೀತಿಯನ್ನು ವಿರೋಧಿಸಲು ಬಿಇಎಂಎಲ್ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ತೀರ್ಮಾನಿಸಿದ್ದು, ಈ ಹೋರಾಟಕ್ಕೆ ಸಹಕಾರ ನೀಡಲು ಬೆಂಗಳೂರು ವಲಯದ ಇತರ ಸಾರ್ವಜನಿಕ ವಲಯದ ಕಾರ್ಮಿಕ ಸಂಘಗಳು ಜಂಟಿಯಾಗಿ ದ್ವಾರ ಸಭೆಗಳನ್ನು ನಡೆಸಲಾಗುತ್ತದೆ. ಜನವರಿ 19 ರಂದು ಬೆ. 6.30 ಕ್ಕೆ ಬಿಇಎಂಎಲ್ ಮೈಸೂರು ಸಂಕೀರ್ಣದ ಕಾರ್ಖಾನೆಯ ಮುಂಭಾಗದಲ್ಲಿ ಬೃಹತ್ ಕಾರ್ಮಿಕರ, ಅಧಿಕಾರಿಗಳ ಮತ್ತು ಗುತ್ತಿಗೆ ಕಾರ್ಮಿಕರ ಸಭೆಯನ್ನು ಕರೆಯಲಾಗಿದ್ದು, ಈ ಸಭೆಗೆ ಸಮನ್ವಯ ಸಮಿತಿಯ ಎಲ್ಲಾ ನಾಯಕರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

comments

Related Articles

error: