ಮೈಸೂರು

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಎಸ್ ಎನ್ ಎಲ್ ನೌಕರರು ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ

ಮೈಸೂರು,ಫೆ.20:- ವೇತನ ಹೆಚ್ಚಳ, 4ಜಿ ಸ್ಪೆಕ್ಟ್ರಮ್ ಹಂಚಿಕೆ ಸೇರಿದಂತೆ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಸಂಚಾರ ನಿಗಮ ಲಿಮಿಟೆಡ್ ನೌಕರರು ನಡೆಸುತ್ತಿರುವ ಮುಷ್ಕರ ಇಂದು ಮೂರನೇ ದಿನಕ್ಕೆ ಕಾಲಿರಿಸಿದೆ.

ಆಲ್ ಯೂನಿಯನ್ಸ್ & ಅಸೋಸಿಯೇಷನ್ಸ್ ಆಫ್ ಬಿಎಸ್ ಎನ್ ಎಲ್ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೈಸೂರಿನ ಜಯಲಕ್ಷ್ಮಿಪುರಂ ಹಾಗೂ ನಜರ್ ಬಾದ್ ನಲ್ಲಿರುವ ಬಿಎಸ್ ಎನ್ ಎಲ್ ಕಛೇರಿ ಬಳಿ ನೌಕರರು ಪ್ರತಿಭಟನಾ ಧರಣಿಯನ್ನು ಇಂದೂ ಕೂಡ ಮುಂದುವರಿಸಿದ್ದು, ಈ ಸಂದರ್ಭ ಮಾತನಾಡಿದ ಅವರು ಬಿಎಸ್ಎನ್ ಎಲ್ ನೌಕರರಿಗೆ ಸೇವಾ ಭದ್ರತೆ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಬೇಕು. ಶೇ.15ರಷ್ಟು ವೇತನ ಹೆಚ್ಚಿಸಬೇಕು. ಮ್ಯಾನೇಜ್ ಮೆಂಟ್ ನೀಡಿರುವ ಪ್ರಸ್ತಾವನೆಯಂತೆ ಬಿಎಸ್ ಎನ್ ಎಲ್ ಗೆ 4ಜಿ ಸ್ಪೆಕ್ಟ್ರಮ್ ಹಂಚಿಕೆ ಮಾಡಿ ಸಂಪರ್ಕ ಜಾಲ ವಿಸ್ತರಿಸಬೇಕು. ಸರ್ಕಾರಿ ನಿಯಮದಂತೆ ಪಿಂಚಣಿ ನೀಡಬೇಕು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ನಾಗೇಂದ್ರ ಆರ್. ಗಣೇಶ್ ಎನ್, ಸುಬ್ರಹ್ಮಣ್ಯ , ವಿ.ರವಿಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: