ಪ್ರಮುಖ ಸುದ್ದಿ

ರಾಹುಲ್ ಗಾಂಧಿ ಅವರೇ ಮುಂದಿನ ಪ್ರಧಾನಿ ಬರೆದಿಟ್ಟುಕೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ

ರಾಜ್ಯ(ಹುಬ್ಬಳ್ಳಿ)ಫೆ.21:- ರಾಹುಲ್ ಗಾಂಧಿ ಅವರೇ ಮುಂದಿನ ಪ್ರಧಾನಿ ಬರೆದಿಟ್ಟುಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ವಿರುದ್ಧ ಪ್ರಬಲ ಆಡಳಿತ ವಿರೋಧಿ ಅಲೆ ಇರುವುದರಿಂದಲೇ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುವುದಿಲ್ಲ ಎಂದು ಹೇಳಿದ್ದೇನೆ. ಹಿಂದಿನ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಯಾವೊಂದು ಬೇಡಿಕೆಯನ್ನು ಬಿಜೆಪಿ ಸರಕಾರ ಈಡೇರಿಸಿಲ್ಲ ಎಂದು ಕಿಡಿಕಾರಿದರು.

ಸೀಟು ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಗೆ ಸ್ಥಾನ ಹಂಚಿಕೆ ಕುರಿತು ಜೆಡಿಎಸ್ ಹಾಗೂ ಕಾಂಗ್ರೆಸ್ ಮಧ್ಯೆ ಕುರಿತು ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ ಗೆಲ್ಲುವ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ. ಎರಡು ಪಕ್ಷಗಳು ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಲೋಕಸಭೆ ಚುನಾವಣೆ ಎದುರಿಸಲಿವೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: