ಕ್ರೀಡೆ

ಟಿ-20 ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಚೇತೇಶ್ವರ ಪೂಜಾರ

ನವದೆಹಲಿ,ಫೆ.21-ಟೆಸ್ಟ್ ಬ್ಯಾಟ್ಸ್ ಮನ್ ಎಂದೇ ಕರೆಯಲ್ಪಡುತ್ತಿದ್ದ ಕ್ರಿಕೆಟಿಗ ಚೇತೇಶ್ವರ ಪೂಜಾರ ಇದೀಗ ದೇಶೀಯ ಟ್ವೆಂಟಿ-20 ಟೂರ್ನಿಯಲ್ಲಿ ಚೊಚ್ಚಲ ಶತಕ ಬಾರಿಸುವ ಮೂಲಕ ಗಮನ ಸೆಳೆದಿದ್ದಾರೆ.

ಅಲ್ಲದೆ, ತಾವು ಟೆಸ್ಟ್ ಕ್ರಿಕೆಟ್ಗೆ ಮಾತ್ರ ಸೀಮಿತ ಎಂದು ಅಂದುಕೊಂಡವರಿಗೆ ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

ಇಂದೋರ್ನಲ್ಲಿ ನಡೆಯುತ್ತಿರುವ ಸೈಯದ್ ಮುಶ್ತಾಕ್ ಅಲಿ ಟ್ರೋಫಿಯಲ್ಲಿ ರೈಲ್ವೇಸ್ ವಿರುದ್ದ ಸೌರಾಷ್ಟ್ರ ತಂಡವನ್ನು ಪ್ರತಿನಿಧಿಸುತ್ತಿರುವ ಪೂಜಾರ ಕೇವಲ 61 ಎಸೆತಗಳಲ್ಲಿ ಅಜೇಯ 100 ರನ್ ಗಳಿಸಿದ್ದಾರೆ. ಪೂಜಾರ ಅವರ ಶತಕದ ನೆರವಿನಿಂದ ಮೂರು ವಿಕೆಟ್ ನಷ್ಟಕ್ಕೆ 188 ರನ್ಗಳ ಬೃಹತ್ ಮೊತ್ತ ಪೇರಿಸಿತು. 163 ಸ್ಟ್ರೇಕ್ರೇಟ್ನಲ್ಲಿ ರನ್ ಪೇರಿಸಿದ ಪೂಜಾರ ಇನ್ನಿಂಗ್ಸ್ನಲ್ಲಿ 16 ಬೌಂಡರಿಗಳು ಹಾಗೂ ಸಿಕ್ಸರ್ ಸೇರಿದ್ದವು.

ಸೌರಾಷ್ಟ್ರ ಪರ ಟಿ-20ನಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪೂಜಾರ ಪಾತ್ರವಾಗಿದ್ದಾರೆ. ರಾಬಿನ್ ಉತ್ತಪ್ಪ (46) ಜತೆಗೂ 82 ರನ್ಗಳ ಜತೆಯಾಟದಲ್ಲೂ ಪೂಜಾರ ಭಾಗಿಯಾಗಿದ್ದರು.

ಒಟ್ಟಿನಲ್ಲಿ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಮಾರಾಟವಾಗದೇ ಉಳಿದುಕೊಳ್ಳುತ್ತಿದ್ದ ಪೂಜಾರಗೆ ಮತ್ತೆ ಬೇಡಿಕೆ ಕುದುರಿಸಿಕೊಳ್ಳಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. (ಎಂ.ಎನ್)

Leave a Reply

comments

Related Articles

error: