ಸುದ್ದಿ ಸಂಕ್ಷಿಪ್ತ

ಗಣರಾಜ್ಯೋತ್ಸವ ಹಾಗೂ ಕುವೆಂಪು ನಮನ ‘ಜ.26’

ಕುವೆಂಪುನಗರದ ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಜ.26ರಂದು ಸಂಜೆ 5.30ಕ್ಕೆ ಕುವೆಂಪುನಗರದ ಸೌಗಂಧಿಕ ಉದ್ಯಾನವನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ‘ಸಂವಿಧಾನ ದಿನ-ಶ್ರೀ ಕುವೆಂಪು ನಮನ’ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡುವರು, ಕೇಂದ್ರ ಸಚಿವ ಅನಂತಕುಮಾರ್ ಪ್ರಧಾನ ಭಾಷಣ ಮಾಡುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ವಸತಿ ಸಚಿವ ಎಂ.ಕೃಷ್ಣಪ್ಪ, ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕ ಎಂ.ಕೆ.ಸೋಮಶೇಖರ್ ಪಾಲ್ಗೊಳ್ಳಲಿದ್ದಾರೆ. ರಂಗಾಯಣದ ಮಾಜಿ ನಿರ್ದೇಶಕ ಜನ್ನಿ ಮತ್ತು ತಂಡದವರಿಂದ ಜನಪದ ಝೇಂಕಾರ ಸಂಗೀತ ಹಾಗೂ ನಿರುಪಮಾ ರಾಜೇಂದ್ರ ಮತ್ತು ತಂಡದಿಂದ ರಸನಾಟ್ಯ ಲೋಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Leave a Reply

comments

Related Articles

error: