ಮೈಸೂರು

ನೀವೆಲ್ಲಾ ಸಿದ್ದರಾಮಯ್ಯನವರಿಗೆ ವೋಟ್ ಹಾಕಿರೋದು,ನಾನ್ಯಾಕೆ ಬಂದ್ ನೋಡಲಿ : ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ಸಚಿವ ಜಿ.ಟಿ‌. ದೇವೇಗೌಡ ಗರಂ

ಮೈಸೂರು,ಫೆ.21:- ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರ  ವಿರುದ್ಧ ಸಚಿವ ಜಿ.ಟಿ‌. ದೇವೇಗೌಡರು ಗರಂ ಆದ ಘಟನೆ ನಡೆದಿದೆ.

ಚಾಮುಂಡೇಶ್ವರಿ ಕ್ಷೇತ್ರದ ಕೆ.ಸಾಲುಂಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯ ನಡೆಯುತ್ತಿತ್ತು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಮತ್ತು ಸಚಿವ ಜಿ.ಟಿ ದೇವೇಗೌಡರ ನಡುವೆ ವಾಗ್ವಾದ ನಡೆದಿದೆ.

ಗ್ರಾಮದೊಳಗೆ ದುರ್ವಾಸನೆ ಬರುತ್ತಿದೆ.  ಬಂದು‌ ಪರಿಶೀಲಿಸಿ  ಎಂದು ಗ್ರಾಮಸ್ಥರು  ಸಚಿವ ಜಿ.ಟಿ ದೇವೇಗೌಡರನ್ನು  ಒತ್ತಾಯಿಸಿದ್ದಾರೆ. ಆದರೆ ಈ ವೇಳೆ ಗರಂ ಆದ ಸಚಿವ ಜಿ.ಟಿ ದೇವೇಗೌಡ, ನೀವ್ ನಂಗೆ ವೋಟ್ ಹಾಕಿದ್ದೀರಾ..? ನೀವೆಲ್ಲಾ ಸಿದ್ದರಾಮಯ್ಯನವರಿಗೆ ವೋಟ್ ಹಾಕಿರೋದು. ನಾನ್ಯಾಕೆ ಬಂದ್ ನೋಡಲಿ ಎಂದು ಕೆಂಡಾಮಂಡಲರಾದ ಘಟನೆ ನಡೆಯಿತು.

ಈ ವೇಳೆ ಜಿಲ್ಲಾ ಪಂಚಾಯಿತಿ ಸದಸ್ಯ ಬೀರಿಹುಂಡಿ‌ ಬಸವಣ್ಣ ಮತ್ತು ಸಿದ್ದರಾಮಯ್ಯ ಬೆಂಬಲಿಗರ ನಡುವೆ ವಾಗ್ವಾದ ನಡೆದಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: