ಮೈಸೂರು

ಫೆಬ್ರವರಿ 24 ರಂದು ನೂತನ ರೇಷ್ಮೆಗೂಡಿನ ಮಾರುಕಟ್ಟೆ ಉದ್ಘಾಟನೆ

ಮೈಸೂರು, ಫೆ.21 : ಮೈಸೂರಿನ ಬಂಡಿಪಾಳ್ಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯ ಉದ್ಘಾಟನಾ ಸಮಾರಂಭವನ್ನು  ಫೆಬ್ರವರಿ 24 ರಂದು ಬೆಳಗ್ಗೆ 9.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರು ನೂತನ ಕಟ್ಟಡ ಉದ್ಘಾಟಿಸುವರು, ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾ.ರಾ.ನಂದೀಶ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಪುಷ್ಟಲತಾ ಜಗನ್ನಾಥ್, ಲೋಕಸಭಾ ಸದಸ್ಯರಾದ ಪ್ರತಾಪಸಿಂಹ, ಆರ್.ಧ್ರುವನಾರಾಯಣ್, ಎಲ್.ಶಿವರಾಮೇಗೌಡ ವಿಧಾನಸಭಾ ಸದಸ್ಯರಾದ ತನ್ವೀರ್‍ಸೇಠ್, ಅಡಗೂರು ಹೆಚ್.ವಿಶ್ವನಾಥ್, ಕೆ.ಮಹದೇವ್, ಡಾ.ಯತೀಂದ್ರ.ಎಸ್, ಹರ್ಷವರ್ಧನ್, ಅಶ್ವಿನ್ ಕುಮಾರ್, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಅನಿಲ್‍ಕುಮಾರ್.ಸಿ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಸ್.ನಾಗರಾಜು, ಧರ್ಮಸೇನ, ಕೆ.ವಿ.ನಾರಾಯಣಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ,  ಮೈಸೂರು ಮಹಾನಗರ ಪಾಲಿಕೆ ಉಪ ಮಹಾಪೌರಾದ ಶಫೀ ಅಹಮದ್, ಮೈಸೂರು ಎ.ಪಿ.ಎಂಸಿ ಅಧ್ಯಕ್ಷ ಪ್ರಭುಸ್ವಾಮಿ.ಕೆ, ಉಪಾಧ್ಯಕ್ಷ ಚಿಕ್ಕಜವರಯ್ಯ, ಕಾರ್ಯದರ್ಶಿ ಬಿ.ಸಿ.ಗಿರೀಶ್, ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷರಾದ ಕೆ.ಎಂ.ಹನುಮಂತರಾಯಪ್ಪ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಎಂ.ಮಹೇಶ್ವರರಾವ್, ಜಿಲ್ಲಾಧಿಕಾರಿ ಅಭಿರಾಮ್‍ಜಿ.ಶಂಕರ್ ಮತ್ತು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಸಮಾರಂಭದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: