ಮೈಸೂರು

ರೈಲ್ವೆ ನಿಲ್ದಾಣದಲ್ಲಿ ಬಾಂಬ್ : ಮೈಸೂರು ರೈಲ್ವೆ ನಿಲ್ದಾಣಾಧಿಕಾರಿಗಳಿಗೆ ಅನಾಮಿಕನಿಂದ ಹುಸಿ ಬಾಂಬ್ ಕರೆ

ಮೈಸೂರು,ಫೆ.22:- ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ  ಉಗ್ರರ ದಾಳಿ ನಡೆದು 44 ಭಾರತೀಯ ಯೋಧರು ಹುತಾತ್ಮರಾದ ಘಟನೆ ಬೆನ್ನಲ್ಲೇ  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಸಿ ಬಾಂಬ್ ಕರೆಯೊಂದು ಬಂದಿದ್ದು, ಆತಂಕ ಸೃಷ್ಟಿಯಾಗಿದೆ.

ಅನಾಮಿಕ ವ್ಯಕ್ತಿಯೋರ್ವ  ಮೈಸೂರು ರೈಲ್ವೆ ನಿಲ್ದಾಣಾಧಿಕಾರಿಗಳಿಗೆ ಹುಸಿ ಬಾಂಬ್ ಕರೆ ಮಾಡಿದ್ದಾನೆ. ರೈಲ್ವೆ ನಿಲ್ದಾಣದ ಹೆಸರು ಹೇಳದೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ.  ಬೆಂಗಳೂರು ಕೇಂದ್ರ ರೈಲ್ವೇ ಕಂಟ್ರೋಲ್ ರೂಂಗೆ ತಡರಾತ್ರಿ ಸುಮಾರು 1.30 ಕ್ಕೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದಾನೆ ಎನ್ನಲಾಗಿದೆ.

ಕರೆ ಬಂದ ಹಿನ್ನೆಲೆಯಲ್ಲಿ ಎಲ್ಲಾ ರೈಲ್ವೇ ನಿಲ್ದಾಣಗಳಲ್ಲೂ  ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ. ಮೈಸೂರು ರೈಲ್ವೆ ನಿಲ್ದಾಣ ಹಾಗೂ ಎಲ್ಲಾ ರೈಲುಗಳಲ್ಲೂ  ತಪಾಸಣೆ ಮಾಡಲಾಗಿದ್ದು  ಅದೃಷ್ಟವಶಾತ್ ಯಾವುದೇ ಬಾಂಬ್ ಅಥವಾ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ.  ಈ ಬಗ್ಗೆ ರೈಲ್ವೇ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದು,  ಕರೆ ಮಾಡಿದ ವ್ಯಕ್ತಿಯ ಫೋನ್ ನಂಬರ್ ಆಧರಿಸಿ ಆತನ ಮೇಲೆ ಕೇಸ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: