ಮೈಸೂರು

ಮೈಸೂರಿನ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಓಡಾಟಕ್ಕೆ ಸಂಪೂರ್ಣ ನಿಷೇಧ ಹೇರಲು ಚಿಂತನೆ

ಮೈಸೂರು,ಫೆ.22:- ಇತಿಹಾಸ ಪ್ರಸಿದ್ಧ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ  ಓಡಾಟಕ್ಕೆ ಸಂಪೂರ್ಣ ನಿಷೇಧ ಹೇರಲು ಚಿಂತನೆ ನಡೆಸಲಾಗಿದೆ.

ಪ್ರಸಾದ ಯೋಜನೆಯಡಿ ಚಾಮುಂಡಿ ಬೆಟ್ಟದ ಅಭಿವೃದ್ದಿಗೆ ಕೇಂದ್ರ ಸರ್ಕಾರದಿಂದ ಮುಂದಾಗಿದ್ದು, ಇದಕ್ಕೆ 100 ಕೋಟಿ ಅನುದಾನ ಸಿಗಲಿದೆ. ಈ ಕುರಿತು ಇಂದು ಅಧಿಕಾರಿಗಳ ಜತೆ ಸಚಿವರಾದ ಜಿ.ಟಿ ದೇವೇಗೌಡ ಮತ್ತು ಸಾ.ರಾ ಮಹೇಶ್ ನೇತೃತ್ವದಲ್ಲಿ ಸಭೆ ನಡೆಯಿತು.

ಈ ನಡುವೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧಕ್ಕೆ ಚಿಂತನೆ ನಡೆಸಲಾಗಿದ್ದು, ಬೆಟ್ಟದ ಪಾದದ ಬಳಿ ವಾಹನಗಳ ಪಾರ್ಕಿಂಗ್ ಮಾಡಿಸಿ ಬ್ಯಾಟರಿ ಚಾಲಿತ ವಾಹನದಲ್ಲಿ ಬೆಟ್ಟದ ಮೇಲೆ ಹೋಗಲು ಅವಕಾಶ ನೀಡಲಾಗುತ್ತದೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆ ನಂತರ ಹೊಸ ಚಿಂತನೆಗೆ ಮುಂದಾಗಿದೆ. ಅಲ್ಲದೇ ಇದೆ ಯೋಜನೆಯ ಅಡಿಯಲ್ಲಿ ಖಾಸಗಿ ವಾಹನ ನಿಷೇಧ ಬ್ಯಾಟರಿ ಚಾಲಿತ ವಾಹನ ಬಳಸುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ

ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಸಾ.ರಾ ಮಹೇಶ್, ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: