ಮೈಸೂರು

ಅಭಿಷೇಕ್ ಆತ್ಮಹತ್ಯೆ ಪ್ರಕರಣ : ಕಾಣದ ಕೈಗಳನ್ನು ಬಂಧಿಸಲು ಒತ್ತಾಯ

ಶೃಂಗೇರಿಯಲ್ಲಿ ನಡೆದ ಅಭಿಷೇಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅದರ ಹಿಂದಿರುವ ಕಾಣದ ಕೈಗಳನ್ನು ಪೊಲೀಸರು ವಶಕ್ಕೆ ಪಡೆದು ಅವರನ್ನು  ಬಂಧಿಸಬೇಕು ಎಂದು ಒತ್ತಾಯಿಸಿ ಮೈಸೂರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಚಾಲಕ ರಾಕೇಶ್ ಮಾತನಾಡಿ ಪೊಲೀಸರು ಕ್ಷುಲ್ಲಕ ಕಾರಣಕ್ಕಾಗಿ ಪೊಲೀಸರು ಅಭಿಷೇಕ್ ಮೇಲೆ ಎಫ್ಐಆರ್ ದಾಖಲಿಸಿದ್ದರು. ಇದರಿಂದ ಮನನೊಂದ ಅಭಿಷೇಕ್  ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರ ಹಿಂದೆ ಕಾಣದ ವ್ಯಕ್ತಿಗಳ ಕೈವಾಡವಿದೆ. ಅವರು ಎಷ್ಟೇ ಬಲಿಷ್ಠರಾಗಿದ್ದರೂ, ಅವರನ್ನು ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಒತ್ತಾಯಿಸಿದರು.

ಪ್ರತಿಭಟನಾ ಮೆರವಣಿಗೆಯು ಮಹಾರಾಣಿ ಜೂನಿಯರ್ ಕಾಲೇಜಿನಿಂದ ಹೊರಟು, ಜೆ.ಎಲ್.ಬಿ.ರಸ್ತೆ, ಹುಣಸೂರು ರಸ್ತೆ ಮೂಲಕ ಸಾಗಿ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಮೆರವಣಿಗೆಯಲ್ಲಿ 300ಕ್ಕು ಅಧಿಕ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Leave a Reply

comments

Related Articles

error: