ಕರ್ನಾಟಕಪ್ರಮುಖ ಸುದ್ದಿ

ಪಲ್ಸ್’ಪೋಲಿಯೋ ಯಶಸ್ಸಿಗೆ ಕ್ರಮವಹಿಸಲು ಸೂಚನೆ: ಎಚ್.ಸಿ. ಪುಟ್ಟಸ್ವಾಮಿ

ಹಾಸನ, ಫೆ.(22): ಜಿಲ್ಲೆಯಾದ್ಯಂತ ಮಾರ್ಚ್ 10ರಂದು ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಲು ಪೂರ್ವ ತಯಾರಿಗೆ ಕ್ರಮವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಸಿ ಪುಟ್ಟಸ್ವಾಮಿ ಅವರು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪಲ್ಸ್ ಪೋಲಿಯೋ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಒಟ್ಟು 443847 ಮನೆಗಳಿದ್ದು, 1829636 ಜನಸಂಖ್ಯೆ ಯನ್ನು ಹೊಂದಿದೆ. ಅದರಲ್ಲಿ ಮುಖ್ಯವಾಗಿ 128096 ಪಲ್ಸ್ ಪೋಲಿಯೋಗೆ ಒಳಪಡುವ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿದ್ದು ಇವರೆಲ್ಲರೂ ಇದರ ಸದುಪಯೋಗ ಪಡೆಯಲಿದ್ದಾರೆ ಎಂದು ಅವರು ತಿಳಿಸಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಸುಮಾರು 872 ಬೂತ್ ಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲು ಮಹಿಳಾ ಆರೊಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 3540 ಜನ ಕಾರ್ಯ ನಿರ್ವಹಿಸುವರು ಮತ್ತು 176 ಜನ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಬಸ್ ನಿಲ್ದಾಣ, ರೈಲು ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚುವರಿಯಾಗಿ 17 ಲಸಿಕಾ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಪಲ್ಸ್ ಪೋಲಿಯೂ ಕಾರ್ಯಕ್ರಮಕ್ಕೆ ಅಗತ್ಯವಿರುವ ಕಂಪ್ಯೂಟರ್‍ಗಳು ಹಾಗೂ ಆಪರೇಟರ್ ಗಳನ್ನು ನೇಮಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಆರ್.ಸಿ.ಹೆಚ್.ಒ ಜನಾರ್ಧನ್, ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳಾದ ಡಾ.ಪುಷ್ಪ, ಜಿಲ್ಲಾ ಪ್ರಭಾರಿ ಶಸ್ತ್ರ ಚಿಕಿತ್ಸಕರಾದ ಡಾ.ಈಶ್ವರ್ ಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ಪಾಪಭೋವಿ ಹಾಗೂ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಭಾಗವಹಿಸಿದ್ದರು. (ಎನ್.ಬಿ)

Leave a Reply

comments

Related Articles

error: