ಮೈಸೂರು

ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ

ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆಯಲ್ಲಿರುವ  ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ.

ಕೆ.ಆರ್.ನಗರ ಪಟ್ಟಣದ ಮಿನಿವಿಧಾನಸೌಧದ ಎದುರು ಹಮ್ಮಿಕೊಳ್ಳಲಾದ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡ  ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳೇಮಿರ್ಲೆ ಸುನೈಗೌಡ ಮಾತನಾಡಿ ಕಳೆದ ನಾಲ್ಕು ವರ್ಷಗಳಿಂದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆವಿಕೆಯನ್ನೂ ಸ್ಥಗಿತಗೊಳಿಸಲಾಗಿದೆ.  ಮೈಸೂರು ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಲು ಸರ್ಕಾರ ಮುಂದಾಗ ಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸ್ಪಷ್ಟ ಆದೇಶ ನೀಡುವವರೆಗೂ ಉಪವಾಸ  ಸತ್ಯಾಗ್ರಹ ಮುಂದುವರೆಸುವುದಾಗಿ ತಿಳಿಸಿದರು

ವಿವಿಧ ಸಂಘಸಂಸ್ಥೆಗಳ ಸದಸ್ಯರುಗಳೂ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

Leave a Reply

comments

Related Articles

error: