ಪ್ರಮುಖ ಸುದ್ದಿಮೈಸೂರು

ರಾಜಕೀಯ ಪಕ್ಷಗಳಿಂದ ಸಮಾನಾಂತರ ಕಾಯ್ದು ಕೊಳ್ಳುವೆವು : ಕುರುಬೂರು ಶಾಂತಕುಮಾರ್

ಚುನಾವಣಾ ಪ್ರಣಾಳಿಕೆಯಲ್ಲಿ ನೀಡುವ ಆಶ್ವಾಸನೆಗಳನ್ನು ಗಂಭೀರವಾಗಿ ಅನುಷ್ಠಾನಗೊಳಿಸಬೇಕು

ಮೈಸೂರು,ಫೆ.23 : ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಳ್ಳದೇ ಸಮಾನಾಂತರ ಕಾಯ್ದು ಕೊಳ್ಳುವ ನಿಲ್ಲುವನ್ನು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ತಾಳಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಬ್ಬು ಬೆಳೆಗಾರರ ಸಂಘವು ಬಿಜೆಪಿ, ಕಾಂಗ್ರೆಸ್, ಸ್ವರಾಜ್ ಇಂಡಿಯಾ ಸೇರಿದಂತೆ ಯಾವ ಪಕ್ಷದೊಂದಿಗೆ ಗುರುತಿಸಿಕೊಳ್ಳದೇ ರೈತ ಸಂಘಟನೆಯಾಗಿಯೇ ಉಳಿಯಲಿದೆ ಎಂದು ಸ್ಪಷ್ಟಪಡಿಸಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಗಳು ಪ್ರಕಟಿಸುವ ಪ್ರಣಾಳಿಕೆಯಲ್ಲಿ ರೈತ ಅಭಿವೃದ್ಧಿ ಪೂರಕವಾಗುವ ಯೋಜನೆಗಳನ್ನು ಕೈಗೆತ್ತಿಕೊಂಡು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ, ವಿವಿಧ ರಾಜ್ಯಗಳ ಸುಮಾರು 20 ಮಂದಿ ರೈತ ಮುಖಂಡರು ಫೆ.27,28ರಂದು ನವದೆಹಲಿಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.

ಬೇಡಿಕೆ : ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು, ಬೆಳೆಗೆ ಬೆಂಬಲ ಬೆಲೆ ನಿಗದಿ, ಕೃಷಿ ಭೂಮಿ ಮಾರುಕಟ್ಟೆ ಮೌಲ್ಯಕ್ಕೆ ಅನುಗುಣವಾಗಿ ಸಾಲ ಲಭಿಸಬೇಕು, ಹೆಚ್ಚಿನ ನೀರಾವರಿ ಯೋಜನೆಗಳಿಗೆ ಒತ್ತು ನೀಡಬೇಕು. ಬೆಳೆ ವಿಮೆ ಪದ್ಧತಿ ಬದಲಾಯಿಸಬೇಕು, ಪ್ರತಿ ವರ್ಷಕ್ಕೊಮ್ಮೆ ದಕ್ಷಿಣ ಭಾರತದಲ್ಲಿ ಸಂಸತ್ ಅಧಿವೇಶನ ನಡೆಸಬೇಕು, ಕೃಷಿಗೆ ಪ್ರತ್ಯೇಕ ಉಪಪ್ರಧಾನಿ ಹುದ್ದೆಯನ್ನು ನೇಮಕಗೊಳಿಸಬೇಕು ಎಂಬ ಮುಂತಾದ ವಿಷಯಗಳನ್ನು ಪ್ರಣಾಳಿಕೆಯಲ್ಲಿ ಅಳವಡಿಸಿಕೊಂಡು ಅನುಷ್ಠಾನಗೊಳಿಸಬೇಕೆಂದು ರಾಜಕೀಯ ಪಕ್ಷಗಳ ಮುಖಂಡರಲ್ಲಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಸಕ್ಕರೆ ಬೆಲೆ : ಕೇಂದ್ರ ಸರ್ಕಾರ ಸಕ್ಕರೆಯ ಕನಿಷ್ಠ ಬೆಲೆಯನ್ನು 31ರೂಗೆ ಏರಿಕೆ ಮಾಡಿದ್ದು ಆ ಕಾರಣ ಕಬ್ಬಿನ ಎಫ್ ಆರ್ ಪಿ ದರನ್ನು ಪ್ರತಿ ಟನ್ನಿಗೆ 200ರೂ.ಗಳನ್ನು ಹೆಚ್ಚವರಿಯಾಗಿ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಮುಖಂಡರಾದ ಬರಡನಪುರ ನಾಗರಾಜ್, ಕನಕಪುರ ರವಿ ಇವರುಗಳು ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: