ಮೈಸೂರು

ಜ.31: ವಿಧಾನಸೌಧ ಚಲೋ

ಅಕ್ಟೋಬರ್ 10, 2016 ರಂದು ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಹೇಳಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೊಳಿಸಬೇಕೆಂದು ಸೆಂಟರ್ ಆಫ್ ಟ್ರೇಡ್ ಯೂನಿಯನ್ಸ್ ನ ರಾಜ್ಯ ಕಾರ್ಯದರ್ಶಿ ಕೆ.ಎನ್.ಉಮೇಶ್ ಹೇಳಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ  ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 18 ಸಾವಿರ ಕನಿಷ್ಠ ವೇತನ ನಿಗದಿ ಮಾಡಬೇಕು. ಸಂಘ ಮಾನ್ಯತೆಗೆ ಶಾಸನ ರೂಪಿಸಬೇಕು, ಸ್ಕೀಂ ನೌಕರರಾದ ಅಂಗನವಾಡಿ, ಬಿಸಿಯೂಟ, ಆಶಾ ನೌಕರರನ್ನು ಕನಿಷ್ಠ ವೇತನ ವ್ಯಾಪ್ತಿಗೆ ಒಳಪಡಿಸಬೇಕು, ಅಸಂಘಟಿತ ಕಾರ್ಮಿಕರಿಗೆ ಭವಿಷ್ಯ ನಿಧಿ ರೂಪಿಸಬೇಕು ಎಂದು ಕನಿಷ್ಠ ಬೇಡಿಕೆಗಳನ್ನು ಒತ್ತಾಯಿಸಿ ಸಿಐಟಿಯು ಜ.31 ರಿಂದ ಅಹೋರಾತ್ರಿ ವಿಧಾನಸೌಧ ಚಲೋ ಹಮ್ಮಿಕೊಂಡಿದೆ. ರಾಜ್ಯದಾದ್ಯಂತ ಸುಮಾರು 2 ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 10.30 ಕ್ಕೆ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ರ್ಯಾಲಿ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಕಾರ್ಯಾಧ‍್ಯಕ್ಷ ಜಗದೀಶ್ ಹೆಚ್.ಎಸ್, ಪ್ರಧಾನ ಕಾರ್ಯದರ್ಶಿ ಜಯರಾಮ್. ಜಿ, ಮುರುಳೀಧರ್ ಪೇಶ್ವ, ಸೋಮೇಶ್ ಉಪಸ್ಥಿತರಿದ್ದರು.

Leave a Reply

comments

Related Articles

error: