ಸುದ್ದಿ ಸಂಕ್ಷಿಪ್ತ

ಬಾಲ್ಯ ವಿವಾಹ ನಿಷೇಧ ಕಾರ್ಯಾಗಾರ -ಸಂವಾದ ನಾಳೆ

ಮೈಸೂರು,ಫೆ.23 : ಬಾಲ್ಯವಿವಾಹ ನಿಷೇಧ ಕಾಯ್ದೆ, ಬಾಲ್ಯವಿವಾಹ ನಿಷೇಧ ನಿಯಮಾವಳಿ ಇತರ ಸಂಸ್ಥೆಗಳಿಂದ ನ್ಯಾಯಾಧೀಶರಿಗೆ, ಸರ್ಕಾರಿ ಅಭಿಯೋಜಕರಿಗೆ ಮತ್ತು ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಮತ್ತು ಸಂವಾದವನ್ನು ಫೆ.24ರಂದು ಬೆಳಗ್ಗೆ 10 ಗಂಟೆಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಎಸ್.ಕೆ.ಒಂಟಿಗೋಡಿ ಉದ್ಘಾಟಿಸುವರು. ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಉದ್ಘಾಟಿಸುವರು. ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎ.ಶೆಟ್ಟರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಬಿ.ಪಿ.ದೇವಮಾನೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಪದ್ಮ ಇತರರು ಇರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: