ಮೈಸೂರು

ಉದ್ಯೋಗ ಮೇಳಕ್ಕೆ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಚಾಲನೆ

ಮೈಸೂರು,ಫೆ.24:- ಇಂದು  ಮತ್ತು ನಾಳೆ ಮೈಸೂರು ಮತ್ತು ಚಾಮರಾಜ ನಗರ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು   ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ  ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾಡಳಿತ ಹಾಗೂ ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದು,  ಕಾರ್ಯಕ್ರಮ ದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿಟಿ ದೇವೇಗೌಡ , ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ ರಾ ಮಹೇಶ್ ರವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಉದ್ಯೋಗಮೇಳದಲ್ಲಿ 80ಕ್ಕೂ ಹೆಚ್ಚು ಕಂಪನಿ ಗಳು ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಆಯ್ಕೆಯಾದ ಕೆಲವು ಅಭ್ಯರ್ಥಿಗಳಿಗೆ ಆಫರ್ ಲೆಟರ್ ನೀಡಲಾಯಿತು. ಆನ್ಲೈನ್ ಮೂಲಕವೂ ಹೆಸರು ನೋಂದಣಿ ಮಾಡಿಕೊಳ್ಳಲು  ಅವಕಾಶ ಇದೆ. ಆಧಾರ್  ಕಾರ್ಡ್  ನೊಂದಿಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುವುದು . ಇಂದು ಬೆಳಗ್ಗೆ ಇಂದಲೇ ಉದ್ಯೋಗಕಾಂಕ್ಷಿಗಳು ಸರತಿಯ ಸಾಲಿನಲ್ಲಿ‌ನಿಂತು ನೊಂದಣಿ ಮಾಡಿಕೊಂಡರು.

ಕಾರ್ಯಕ್ರಮ ದಲ್ಲಿ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ , ಶಾಸಕರುಗಳಾದ ಎಲ್ ನಾಗೇಂದ್ರ, ಅಶ್ವೀನ್ ಕುಮಾರ್ ಮತ್ತು ಮರಿ ತಿಬ್ಬೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: