ಮೈಸೂರು

ಮೂವರು ಸರಗಳ್ಳರ ಬಂಧನ

ಅಪರಾಧ ಪ್ರಕರಣವೊಂದರಲ್ಲಿ ಚಿಕ್ಕಮಗಳೂರು ಪೊಲೀಸರಿಗೆ ಸೆರೆಸಿಕ್ಕಿದ್ದ ಮೂವರು ಸರಗಳ್ಳರನ್ನು ಕೃಷ್ಣರಾಜ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರಿಂದ ಸುಮಾರು 1.35ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ದ್ವಿಚಕ್ರವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ನಾಚನಹಳ್ಳಿಪಾಳ್ಯದ ಮಹಮ್ಮದ್ ಸಮೀವುಲ್ಲ, ಚಿಕ್ಕಮಗಳೂರಿನ ಇರ್ಫಾನ್, ಅಕ್ಮಲ್ ಪಾಷಾ ಅಲಿಯಾಸ್ ಬಾಬು ಎಂದು ಗುರುತಿಸಲಾಗಿದೆ. ಖಾಸಗಿ ಫೈನಾನ್ಸ್ ಕಂಪನಿಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಠಾಣೆಯ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಸರಗಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: