ಮೈಸೂರು

ಬಂಡೀಪುರ ಅಭಯಾರಣ್ಯದಲ್ಲಿ ಪ್ರಾಣಿ ಮತ್ತು ಸಸ್ಯ ಸಂಕುಲದ ರಕ್ಷಣೆಗೆ ಧಾವಿಸುವಂತೆ ರಾಜವಂಶಸ್ಥ ಯದುವೀರ್ ಮನವಿ

ಮೈಸೂರು,ಫೆ.25:- ಕಳೆದೆರಡು ಮೂರು ದಿನಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿಗೆ ರಾಜವಂಶಸ್ಥ   ಯದುವೀರ್ ವಿಷಾದ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಪ್ರಾಣಿ ಮತ್ತು ಸಸ್ಯ ಸಂಕುಲದ  ರಕ್ಷಣೆಗೆ ಧಾವಿಸುವಂತೆ ಮನವಿ ಮಾಡಿದ್ದಾರೆ. ಪರಿಸರ ಪರಂಪರೆಗೆ ಸಂಭವಿಸಿರುವ ಘಟನೆ ಬಹಳ ದುಃಖಕರ ಸಂಗತಿ. ಅರಣ್ಯ ಇಲಾಖೆಯೊಂದಿಗೆ ಸ್ವಯಂಸೇವಕರು ಕೈ ಜೋಡಿಸಿ ಎಂದು ಕರೆ ನೀಡಿದ್ದು, ನೀರಿನ ಬಾಟಲಿಗಳು, ಗ್ಲುಕೋಸ್, ಔಷಧ ಮತ್ತು ಇತರೆ ಆಹಾರ ಸರಬರಾಜಿಗೆ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಗೆ ಸಂಪೂರ್ಣ ಸಹಕಾರ ಘೋಷಿಸಿದ  ಅವರು ಸಾಮಾಜಿಕ ಜಾಲತಾಣದ ಮೂಲಕ ರಕ್ಷಣಾ ಕಾರ್ಯದಲ್ಲಿ ತೊಡಗುವಂತೆ ಮನವಿ ಮಾಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: