ಮೈಸೂರು

ಮುನಿರಾಜು ಅವರಿಗೆ ಟಿಕೇಟ್ ನೀಡಲು ಒತ್ತಾಯ

ಮುಂಬರುವ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಖಿಲ ಕರ್ನಾಟಕ ಭೋವಿ ಮಹಾಸಭಾದ ಅಧ‍್ಯಕ್ಷ ಆರ್. ಮುನಿರಾಜು ಅವರಿಗೆ ಟಿಕೆಟ್ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಜಿಲ್ಲಾ ಕಾರ್ಯಾಧ್ಯಕ್ಷ ರಾಜಣ್ಣ ಒತ್ತಾಯಿಸಿದ್ದಾರೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುನಿರಾಜು ಅವರಿಗೆ ಸ್ಪರ್ಧಿಸಲು ಟಿಕೇಟ್ ನೀಡಿ, ಒಂದು ವೇಳೆ ಟಿಕೆಟ್ ಸಿಗದಿದ್ದಲ್ಲಿ ಪಕ್ಷೇತರ ಅಭ‍್ಯರ್ಥಿಯಾಗಿ ಅವರು ಸ್ಪರ್ಧಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಲಿಂಗಾಯತ ಸಮುದಾಯದ ಶಿವಣ್ಣ, ಯುವ ಮುಖಂಡ ಸಿದ್ದರಾಜು, ಜಿಲ್ಲಾಧ‍್ಯಕ್ಷ ದೊರೆಸ್ವಾಮಿ, ತಾಲೂಕು ಕಾರ್ಯಾಧ‍್ಯಕ್ಷ ರಮೇಶ್ ಪಾಳ್ಯ, ವಿಶೇಷ ಸಲಹೆಗಾರ ಮಿಥುನ್ ಹಾಜರಿದ್ದರು.

Leave a Reply

comments

Related Articles

error: