ಮೈಸೂರು

ರಾಮಾನುಜಾಚಾರ್ಯರ ಸಹಸ್ರಮಾನೋತ್ಸವ ಸಂಭ್ರಮಾಚರಣೆ

ಶ್ರೀ ರಾಮಾನುಜ ಪ್ರತಿಷ್ಠಾನಂ ಮೈಸೂರು ಮತ್ತು  ಶ್ರೀ ರಾಮಾನುಜ ಸಹಸ್ರಮಾನ ಸಭಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ರಾಮಾನುಜಾಚಾರ್ಯರ ಸಹಸ್ರಮಾನೋತ್ಸವ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಪದಾಧಿಕಾರಿ ಡಾ.ಶಲ್ವಪಿಳ್ಳೈ ಅಯ್ಯಂಗಾರ್ ಹೇಳಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಮಾನುಜಾಚಾರ್ಯರ ಸಹಸ್ರಮಾನೋತ್ಸವ 2017 ನೇ ಮೇ 1 ರಂದು ಘಟಿಸುತ್ತಿದೆ.  ಆದ್ದರಿಂದ ಮೈಸೂರಿನಲ್ಲಿ ಜ.22 ರಂದು ‘ನಮ್ಮ ನಡಿಗೆ ಶ್ರಿ ರಾಮಾನುಜರ ಸಹಸ್ರಮಾನೋತ್ಸವದ ಕಡೆಗೆ’ ಎಂಬ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದ್ದು,  ಅಂದು ಸಂಜೆ 4 ಗಂಟೆಗೆ ನಗರದ ಜಗನ್ಮೋಹನ ಅರಮನೆಯಲ್ಲಿ ಬಳಿ ಇರುವ ಶ್ರೀ ಬ್ರಹ್ಮತಂತ್ರ ಪರಕಾಲ ಮಠದಿಂದ ಪ್ರಾರಂಭಿಸಿ, ಕೃಷ್ಣಮೂರ್ತಿಪುರಂ ಶ್ರೀರಾಮ ಮಂದಿರದಲ್ಲಿ ಕೊನೆಗೊಳ್ಳಲಿದೆ ಎಂದು ಹೇಳಿದರು. ಈ ಕಾರ್ಯಕ್ರಮವನ್ನು ಶ್ರೀಮದಭಿನವ ವಾಗೀಶ ಪರಕಾಲ ಮಹಾಸ್ವಾಮಿಗಳು ಉದ್ಘಾಟಿಸಲಿದ್ದಾರೆ. ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಮಾಜಿ ಸಚಿವ ಎಸ್.ಎ.ರಾಮದಾಸ್, ಮೇಯರ್ ರವಿಕುಮಾರ್ ಇನ್ನಿತರ ಗಣ್ಯರು ಉಪಸ್ಥಿತರಿರುತ್ತಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ನ ಅಧ‍್ಯಕ್ಷ ಬಿ.ಎಸ್.ಪಾರ್ಥಸಾರಥಿ, ವಂಗೀಪುರ ಮಠದ ಇಳೈಆಳ್ವಾರ್ ಸ್ವಾಮೀಜಿ, ಜಿಲ್ಲಾ ಬ್ರಾಹ್ಮಣ ಸಂಘದ ಅಧ‍್ಯಕ್ಷ ಡಿ.ಟಿ.ಪ್ರಕಾಶ್ ಹಾಜರಿದ್ದರು.

Leave a Reply

comments

Related Articles

error: