ದೇಶಪ್ರಮುಖ ಸುದ್ದಿ

ಉಗ್ರರ ಮೇಲೆ ವಾಯುದಾಳಿ: ಭಾರತೀಯ ಸೈನಿಕರಿಗೆ ಖರ್ಗೆ ಅಭಿನಂದನೆ

ಕಲಬುರಗಿ (ಫೆ.26): ಪಾಕಿಸ್ತಾನ ಆಕ್ರಮಿತ ಕಾಶ್ಮೀರದದಲ್ಲಿರುವ ಉಗ್ರರ ಮೇಲೆ ಭಾರತೀಯ ವಾಯು ಸೇನೆ ದಾಳಿ ಮಾಡಿರುವುದು ಸ್ವಾಗತಾರ್ಹ. ಈ ಕಾರ್ಯಕ್ಕಾಗಿ ಭಾರತೀಯ ಸೇನೆಯನ್ನು ಅಭಿನಂದಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಉಗ್ರರ ಅಡಗುತಾಣಗಳ ಮೇಲೆ ವಾಯುದಾಳಿ ನಡೆಸಿದ ಬಗ್ಗೆ ಸಮಗ್ರ ಮಾಹಿತಿ ಇಲ್ಲ. ಉಗ್ರರ ಮೇಲೆ ದಾಳಿ ಎಲ್ಲ ಸರ್ಕಾರಗಳು ಮಾಡುತ್ತಲೇ ಬಂದಿವೆ. ಯುಪಿಎ ಸರ್ಕಾರವಿದ್ದಾಗಲೂ ಆರು ಬಾರಿ ದಾಳಿ ನಡೆಸಲಾಗಿತ್ತು ಎಂದರು.

ಇನ್ನು ದಾಳಿ ಕುರಿತಂತೆ ಇಂದು ದೆಹಲಿಯಲ್ಲಿ ಸರ್ವಪಕ್ಷಗಳ ಸಭೆ ಇದ್ದು, ಭಾರತೀಯ ಸೇನೆ ಕೈಗೊಳ್ಳುವ ನಿರ್ಣಯಕ್ಕೆ ನಮ್ಮ ಬೆಂಬಲ ಇದೆ ಎಂದು ಈಗಾಗಲೇ ತಿಳಿಸಿದ್ದೇವೆ ಎಂದು ತಿಳಿಸಿದರು. (ಎನ್.ಬಿ)

Leave a Reply

comments

Related Articles

error: