ಮೈಸೂರು

ವರದಕ್ಷಿಣೆ ಕಿರುಕುಳ ಹಿನ್ನೆಲೆ : ಸೀಮೆಎಣ್ಣೆ ಸುರಿದುಕೊಂಡು ಗೃಹಿಣಿ ಆತ್ಮಹತ್ಯೆ

ಮೈಸೂರು,ಫೆ.27:- ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಗೃಹಿಣಿಯೋರ್ವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ಚಿಕಿತ್ಸೆಗಾಗಿ  ದಾಖಲಾಗಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ  ಮೈಸೂರಿನಲ್ಲಿ ನಡೆದಿದೆ.

ಮೈಸೂರು ತಾಲೂಕಿನ ಉದ್ಬೂರು ನಿವಾಸಿ ಭಾಗ್ಯ(26) ಎಂಬವರು ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಸೀಮೆಎಣ್ಣೆ ಸುರಿದುಕೊಂಡು  ಆತ್ಮಹತ್ಯೆಗೆ ಯತ್ನಿಸಿದ್ದರು. ಪತಿ ಮನೆಯವರಿಂದ ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸೀಮೆಎಣ್ಣೆ ಸುರಿದುಕೊಂಡಿದ್ದರು. ಕಳೆದ ನಾಲ್ಕುವರ್ಷಗಳ ಹಿಂದೆ ಉದ್ಬೂರು ಗ್ರಾಮದ ಸುರೇಶ್ ಎಂಬಾತನೊಂದಿಗೆ ಮೈಸೂರಿನ ಶಾರದಾದೇವಿನಗರ ನಿವಾಸಿ ವೀರಪ್ಪ ಮಂಜುಳ ದಂಪತಿ ದತ್ತು ಪುತ್ರಿ ಭಾಗ್ಯಳನ್ನು ವಿವಾಹ ಮಾಡಿಕೊಡಲಾಗಿತ್ತು. ಪತಿ ಮನೆಯವರ ಕಿರುಕುಳಕ್ಕೆ ಸೀಮೆಎಣ್ಣೆ, ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಭಾಗ್ಯ ಇದೀಗ ಒಂದೂವರೆ ವರ್ಷದ ಗಂಡುಮಗು, ಎರಡೂವರೆ ವರ್ಷದ ಹೆಣ್ಣುಮಗುವನ್ನು  ಅಗಲಿದ್ದಾರೆ.

ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: