ಮೈಸೂರು

ವಿಭಜಕಕ್ಕೆ ಗುದ್ದಿದ ಕಾರು: ಇಬ್ಬರ ಸ್ಥಿತಿ ಚಿಂತಾಜನಕ

ಮೈಸೂರಿನ ಯರಗನಹಳ್ಳಿ ಜಂಕ್ಷನ್ ಬಳಿ ರಸ್ತೆ ವಿಭಜಕಕ್ಕೆ ಕಾರೊಂದು ಗುದ್ದಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ  ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಶನಿವಾರ ಸಾಯಂಕಾಲ 6ಗಂಟೆಯ ಸುಮಾರಿಗೆ ನಡೆದಿದೆ.

ಯರಗನಹಳ್ಳಿ ಕಡೆಯಿಂದ ಬೆಂಗಳೂರು ರಸ್ತೆಯ ಕಡೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಗುದ್ದಿದೆ. ಇದರಿಂದ ಕಾರಿನಲ್ಲಿದ್ದ ಐವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.  ಮತ್ತೆ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿದ್ದಾರ್ಥನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: