
ಮೈಸೂರು
ಮೈಸೂರಿನಲ್ಲಿ ನಾಳೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರವಾಸ
ಮೈಸೂರು,ಫೆ.28:- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾರ್ಚ್ 1 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 9-30 ಕ್ಕೆ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ 2.30 ಗಂಟೆಗೆ ಆಲನಹಳ್ಳಿ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಮೆಗಾ ಡೈರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3.30 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ನೂತನ ಕಟ್ಟಡಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 5.30 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 7-30 ಗಂಟೆಗೆ ಬೆಂಗಳೂರಿಗೆ ತೆರಳುವರು. (ಕೆ.ಎಸ್,ಎಸ್.ಎಚ್)