ಮೈಸೂರು

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : ಇಬ್ಬರ ಬಂಧನ

ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಯುವಕರನ್ನು ಬಂಧಿಸಿ, ಓರ್ವ ಮಹಿಳೆಯನ್ನು ರಕ್ಷಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಬಂಧಿತರನ್ನು ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿಯ ಕಿರಣ್ ಅಲಿಯಾಸ್ ಭದ್ರ(28), ಕೆ.ಆರ್.ಪೇಟೆಯ ಭರತ್(23) ಎಂದು ಗುರುತಿಸಲಾಗಿದೆ. ಇವರು ಸಿದ್ದಾರ್ಥನಗರದ ಸನ್ಮಾರ್ಗ ರಸ್ತೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇಲೆ ದಾಳಿ ನಡೆಸಿದ ಸಿಸಿಬಿ ಮತ್ತು ನಜರಾಬಾದ್ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿ, ಓರ್ವ ಮಹಿಳೆಯನ್ನು ರಕ್ಷಿಸಿದ್ದಾರೆ.

ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

comments

Related Articles

error: