ಸುದ್ದಿ ಸಂಕ್ಷಿಪ್ತ

ಮಾರ್ಚ್ 1ರಂದು ಕಾರ್ಮಿಕ ಸನ್ಮಾನ ಕಾರ್ಯಕ್ರಮ

ಹಾಸನ (ಫೆ.28): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಅಂಸಂಘಟಿತ ಕಾರ್ಮಿಕರ ದಿನದ ಅಂಗವಾಗಿ ಮಾರ್ಚ್ 1ರಂದು ಬೆಳಗ್ಗೆ 11ಕ್ಕೆ ಅಂಬೇಡ್ಕರ್ ಭವನದಲ್ಲಿ ಕಾರ್ಮಿಕ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಾಜಿ ಪ್ರಧಾನ ಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡ ಅವರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದಾರೆ. ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ ರೇವಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಶಾಸಕ ಪ್ರೀತಂ ಜೆ ಗೌಡ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದೀಯ ಕಾರ್ಯದರ್ಶಿಗಳಾದ ಎಂ.ಎ ಗೋಪಾಲಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಿ.ಎಸ್.ಶ್ವೇತಾದೇವರಾಜ್, ಶಾಸಕರುಗಳಾದ ಹೆಚ್.ಕೆ ಕುಮಾರಸ್ವಾಮಿ, ಕೆ.ಎಂ ಶಿವಲಿಂಗೇಗೌಡ, ಸಿ.ಎನ್ ಬಾಲಕೃಷ್ಣ, ಕೆ.ಎಸ್ ಲಿಂಗೇಶ್, ಎ.ಟಿ ರಾಮಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಬಿ.ಟಿ ಸತೀಶ್, ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಎ.ಎನ್ ಪ್ರಕಾಶ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ, ಕಾರ್ಮಿಕ ಅಧಿಕಾರಿ ಹೆಚ್.ಎನ್.ರಮೇಶ್, ಉಪ ಕಾರ್ಮಿಕ ಆಯುಕ್ತ ವೆಂಕಟೇಶ್ ಅಪ್ಪಯ್ಯ ಶಿಂದಿ ಹಟ್ಟಿ ಮತ್ತಿತರರು ಭಾಗವಹಿಸಲಿರುವರು. (ಎನ್.ಬಿ)

Leave a Reply

comments

Related Articles

error: