ಮೈಸೂರು

ನಾನು ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲ್ಲ : ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು,ಮಾ.1:- ನಾನು ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲಿ  ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿಂದು   ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನನ್ನ‌ ಹೆಸರು ಹಲವು ಕಡೆ ಕೇಳಿ ಬರುತ್ತಿದೆ. ಚುನಾವಣೆ ಬಂತು ಅಂದರೆ‌  ಹೆಸರು ಕೇಳಿಬರುವುದು ಸಹಜ. ನನ್ನ‌ ಸ್ಪರ್ಧೆ ವಿಚಾರ ನಮ್ಮ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು. ಸದ್ಯಕ್ಕೆ ನಾನು ಚುನಾವಣೆಗೆ ಸ್ಪರ್ಧೆ ಮಾಡುವ ಆಸೆ ಇಲ್ಲ. ನಾನು ಪಕ್ಷದ ಅಭ್ಯರ್ಥಿಗಳ ಪರ ಕೆಲಸ‌ ಮಾಡುತ್ತೇನೆ. ನಾನು ಪಕ್ಷದ ಕಾರ್ಯಕರ್ತ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: