ಮೈಸೂರು

ತ್ಯಾಜ್ಯ ವಸ್ತುಗಳಿಗೆ ಬೆಂಕಿ : ಸ್ಥಳೀಯರಲ್ಲಿ ಆತಂಕ

ಮೈಸೂರಿನ ಬನ್ನಿಮಂಟಪದ ಬಳಿ ಇರುವ ರಾಯಲ್ ಫಂಕ್ಷನ್ ಹಾಲ್ ಸಮೀಪ ಇರುವ ಖಾಲಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿ ಸ್ಥಳೀಯಲ್ಲಿ ಆತಂಕವನ್ನು ಸೃಷ್ಟಿಸಿತ್ತು.

ಖಾಲಿ ಜಾಗದಲ್ಲಿ ಹಲವು ಕಸಕಡಗಡಿಗಳು, ತ್ಯಾಜ್ಯಗಳನ್ನು ತಂದು ಸುರಿಯಲಾಗಿತ್ತು. ಅಲ್ಲಿ ಸುತ್ತಮುತ್ತಲೂ ಇದ್ದ ಕಸಕಡ್ಡಿಗಳಿಗೆ ಬೆಂಕಿ ಹತ್ತಿಕೊಂಡು ಧಗಧಗನೆ ಉರಿಯಲಾರಂಭಿಸಿತ್ತು. ಬನ್ನಿಮಂಟಪದ ಸಮೀಪ ಇರುವ ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಎನ್.ಆರ್.ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ.

Leave a Reply

comments

Related Articles

error: