ಸುದ್ದಿ ಸಂಕ್ಷಿಪ್ತ

ಮಾರ್ಚ್ 4 ರಂದು ದಲಿತ ವಚನಕಾರರ ಜಯಂತಿ

ಮಂಡ್ಯ (ಮಾ.2): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಸಭೆ ಇವರ ಸಹಯೋಗದಲ್ಲಿ ದಲಿತ ವಚನಕಾರರ ಜಯಂತಿ ಕಾರ್ಯಕ್ರಮ ಮಾರ್ಚ್ 4 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಸಣ್ಣ ನೀರಾವರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್ ಪುಟ್ಟರಾಜು ಉದ್ಘಾಟನೆ ಮಾಡುವರು. ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ ಅವರು ಘನ ಉಪಸ್ಥಿತಿ ವಹಿಸುವರು. ಮಂಡ್ಯ ವಿಧಾನಸಭಾ ಶಾಸಕರಾದ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು ಎಂದು ಎಂದು ತಿಳಿಸಲಾಗಿದೆ. (ಎನ್.ಬಿ)

Leave a Reply

comments

Related Articles

error: