ಪ್ರಮುಖ ಸುದ್ದಿಮೈಸೂರು

ರಾಜ್ಯ ಸರಕಾರದ ದುರಾಡಳಿತದ ಬಗ್ಗೆ ಜನರು ಬೇಸತ್ತಿದ್ದಾರೆ : ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ

ಮೈಸೂರು,ಮಾ.3:- ಈ ಬಾರಿಯ  ಲೋಕ ಸಭಾ ಚುನಾವಣೆಯಲ್ಲಿ  ರಾಜ್ಯದಲ್ಲಿ   22 ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ  ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ  ನಾಯಕ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ

ಮೈಸೂರಿನಲ್ಲಿ  ಮಾತನಾಡಿದ ಅವರು  ಲೋಕಸಭೆ ಚುನಾವಣೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಜ್ಯ ಸರಕಾರದ ದುರಾಡಳಿತದ ಬಗ್ಗೆ ಜನರು ಬೇಸತ್ತಿದ್ದಾರೆ .ಇನ್ನೊಂದು ವಾರದೊಳಗೆ ಅಭ್ಯರ್ಥಿಗಳ ಘೋಷಣೆ ಮಾಡಲಿದ್ದೇವೆ. ರಾಜ್ಯ ಸರ್ಕಾರ  ರೈತರ ಸಾಲ ಮನ್ನಾ  ಮಾಡುವುದಾಗಿ ತಿಳಿಸಿದ್ದರೂ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಜೆಡಿಎಸ್ ಹಾಗೂ ಕಾಂಗ್ರೆಸ್ ಸರ್ಕಾರದಲ್ಲಿ  ಹೊಂದಾಣಿಕೆ ಇಲ್ಲದೆ  ವ್ಯತ್ತಿರಿಕ್ತ  ಹೇಳಿಕೆಗಳನ್ನು ನೀಡಿ ಕಚ್ಚಾಡುತ್ತಿದ್ದಾರೆ. ಜನರು ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಒಲವು ತೋರುತ್ತಿದ್ದು ಕೇಂದ್ರ ಸರಕಾರ ನೀಡಿದ ಅನುದಾನವನ್ನು  ಸರ್ಕಾರ  ಸರಿಯಾಗಿ ಸದ್ಬಳಕೆ ಮಾಡಿಕೊಳ್ಳದೇ ರಾಜ್ಯದ ಜನರಿಗೆ ಅನ್ಯಾಯ ಮಾಡಿದೆ , ಈ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ತಿಳಿಸಲಾಗುವುದು ಎಂದು ತಿಳಿಸಿದರು.      (ಎಸ್.ಎಚ್)

Leave a Reply

comments

Related Articles

error: