ಮೈಸೂರು

ಪಕ್ಷಕ್ಕೆ ಪ್ರಾಮಾಣಿಕ ಕಾರ್ಯಕರ್ತರೇ ಆಸ್ತಿ : ಕುಮಾರಸ್ವಾಮಿ ಅಭಿಮತ

ಪಕ್ಷಕ್ಕೆ ಪ್ರಾಮಾಣಿಕ ಕಾರ್ಯಕರ್ತರೇ ಆಸ್ತಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡ ಅವರು ಮಾತನಾಡಿದರು. ಕಾಂಗ್ರೆಸ್ ಅಧಿಕಾರದಲ್ಲಿದೆ ಆದರೆ ಅದಕ್ಕೆ ಸಮರ್ಥವಾದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಾಗುತ್ತಿಲ್ಲ. ಹಲವು ಪ್ರಾಮಾಣಿಕರನ್ನು ಕಾಂಗ್ರೆಸ್ ಹಣದ ಆಮಿಷ ತೋರಿಸಿ ಸೆಳೆಯಲು ಯತ್ನಿಸಿತು. ಆದರೆ ಅದು ಸಾಧ್ಯವಾಗಲಿಲ್ಲ ಎಂದರು.

ಫೆಬ್ರವರಿ ಅಂತ್ಯದ ವೇಳೆಗೆ ಮುಂಬರುವ ವಿಧಾನಸಭಾ ಚುನಾವಣೆಯ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಈಗ ಯಾವುದೂ ಅಂತಿಮ ತೀರ್ಮಾನವಾಗಿಲ್ಲ. ಉಪಚುನಾವಣೆ ನಡೆಯುವುದು ಅನುಮಾನವಾಗಿದೆ ಎಂದರು.

ವೇದಿಕೆಯಲ್ಲಿ ವಿಧಾನಪರಿಷತ್ತಿನ ಉಪಸಭಾಪತಿ ಮರಿತಿಬ್ಬೇಗೌಡ, ಮೇಯರ್ ಎಂ.ಜೆ.ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

 

Leave a Reply

comments

Related Articles

error: