ಸುದ್ದಿ ಸಂಕ್ಷಿಪ್ತ

ಮಾ.6ರಂದು ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತು ಕಾರ್ಯಾಗಾರ

ಹಾಸನ (ಮಾ.5): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇದ ಕಾಯಿದೆಯ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಮಾ.6 ರಂದು ಮಧ್ಯಾಹ್ನ 2.30ಕ್ಕೆ ಬಿ.ಸಿ ರಾಯ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳಾದ ಸಿ.ಕೆ ಬಸವರಾಜು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ವಹಿಸಲಿದ್ದಾರೆ.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹೆಚ್.ಎಲ್. ಜನಾರ್ಧನ್ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಟಿ.ಪಾಪಬೋವಿ, ಭಾರತೀಯ ವೈಧ್ಯಕೀಯ ಸಂಘದ ಅಧ್ಯಕ್ಷರಾದ ಡಾ.ಶಿವಪ್ರಸಾದ್ ಬಿ.ಎನ್, ಜಿಲ್ಲಾ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಸಲಹಾ ಸಮಿತಿ ಅಧ್ಯಕ್ಷರಾದ ಡಾ.ಸುಜಾತ, ಹೆಚ್.ಎಸ್.ಓ.ಜಿ ಅಧ್ಯಕ್ಷರಾದ ಡಾ.ಪೂರ್ಣಿಮ ಮಹೇಶ್ ಭಾಗವಹಿಸಲಿರುವರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಹೇಮಲತಾ ಎಂ.ಸಿ, ಎಇ.ಎನ್.ಡಿ.ಟಿ ತಪಾಸಣಾ ಸದಸ್ಯರಾದ ಡಾ.ಭಾರತಿ ರಾಜಶೇಖರ್, ಜಿಲ್ಲಾ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಸಲಹಾ ಸಮಿತಿ ಸದಸ್ಯರಾದ ಡಾ.ಸತೀಶ್, ದೇವರಾಜೇಗೌಡ ಉಪನ್ಯಾಸ ನೀಡಲಿದ್ದಾರೆ. (ಎನ್.ಬಿ)

Leave a Reply

comments

Related Articles

error: